Natwar Lal movie: ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ "ನಟ್ವರ್ ಲಾಲ್" ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ‌ವೀಕ್ಷಿಸುತ್ತಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ ಮತ್ತೊಂದು ಚಿತ್ರದ ಘೋಷಣೆಯಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ:ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ: ಪ್ರಕಾಶ್‌ ಬೆಳವಾಡಿ


ಚಿತ್ರಕ್ಕೆ "ನೆಪೋಲಿಯನ್" ಎಂದು ಹೆಸರಿಡಲಾಗಿದೆ. ಸಂಕ್ರಾಂತಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು "ನಟ್ವರ್ ಲಾಲ್" ಚಿತ್ರದ ನಿರ್ದೇಶಕ ಲವ ವಿ ಅವರೆ ನಿರ್ದೇಶಿಸುತ್ತಿದ್ದಾರೆ‌. "ವಿಕ್ರಾಂತ್ ರೋಣ" ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಹಾಗೂ "ಮಾರ್ಟಿನ್" ಖ್ಯಾತಿಯ ಮಹೇಶ್ ಅವರ ಸಂಕಲನ ಈ ನೂತನ ಚಿತ್ರಕ್ಕಿದೆ. 


ಮುಂದಿನ ತಿಂಗಳ ಮಧ್ಯದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಕರ್ನಾಟಕದ ಅನೇಕ‌ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಶೋಷಿತ ಹೆಣ್ಣುಮಕ್ಕಳ ಪರ ಧ್ವನಿ ಎತ್ತುವ ಕಥಾಹಂದರ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ದ್ಯಾವಿಪ್ರಸಾದ್ ಸಂಗೀತ ನೀಡುತ್ತಿದ್ದಾರೆ‌. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.


ಇದನ್ನೂ ಓದಿ:ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.