Taraka Ratna : ಜೂ. ಎನ್‌ಟಿಆರ್‌ ಅಣ್ಣನ ಆರೋಗ್ಯ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ಬಂದ ಕುಟುಂಬಸ್ಥರು..!

ನಂದಮೂರಿ ತಾರಕರತ್ನ ಸ್ಥಿತಿ ಚಿಂತಾಜನಕವಾಗಿದೆ. ತಾರಕರತ್ನ ಅವರ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಬಾಲಕೃಷ್ಣ ಹಾಗೂ ಇತರ ಕುಟುಂಬಸ್ಥರು ಇದೀಗ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ತಲುಪಿದ್ದಾರೆ. ಇಂದು ಸಂಜೆ ನಾಲ್ಕು ಮೂವತ್ತು ನಿಮಿಷಕ್ಕೆ ಅಧಿಕೃತ ಆರೋಗ್ಯ ಬುಲೆಟಿನ್ ಬಿಡುಗಡೆಯಾಗಲಿದೆ.

Written by - Krishna N K | Last Updated : Feb 18, 2023, 03:49 PM IST
  • ನಂದಮೂರಿ ತಾರಕರತ್ನ ಸ್ಥಿತಿ ಚಿಂತಾಜನಕವಾಗಿದೆ.
  • ತಾರಕರತ್ನ ಅವರ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
  • ಕುಟುಂಬಸ್ಥರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆ ತಲುಪಿದ್ದಾರೆ.
Taraka Ratna : ಜೂ. ಎನ್‌ಟಿಆರ್‌ ಅಣ್ಣನ ಆರೋಗ್ಯ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ಬಂದ ಕುಟುಂಬಸ್ಥರು..! title=

Taraka Ratna Health updates : ನಂದಮೂರಿ ತಾರಕರತ್ನ ಸ್ಥಿತಿ ಚಿಂತಾಜನಕವಾಗಿದೆ. ತಾರಕರತ್ನ ಅವರ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಬಾಲಕೃಷ್ಣ ಹಾಗೂ ಇತರ ಕುಟುಂಬಸ್ಥರು ಇದೀಗ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ತಲುಪಿದ್ದಾರೆ. ಇಂದು ಸಂಜೆ ನಾಲ್ಕು ಮೂವತ್ತು ನಿಮಿಷಕ್ಕೆ ಅಧಿಕೃತ ಆರೋಗ್ಯ ಬುಲೆಟಿನ್ ಬಿಡುಗಡೆಯಾಗಲಿದೆ.

ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿರುವ ನಂದಮೂರಿ ತಾರಕರತ್ನ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 23 ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾರಕರತ್ನ ಅವರಿಗೆ ವಿದೇಶಿ ವೈದ್ಯರಿಂದಲೂ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯದಲ್ಲಿ ಕೊಂಚ ಚೇತರಿಸಿಕೊಂಡಂತೆ ಕಂಡರೂ ಮತ್ತೆ ಅದೇ ಪರಿಸ್ಥಿತಿ ತಲೆದೋರಿದೆ ಎನ್ನಲಾಗುತ್ತಿದೆ. ತಾರಕರತ್ನ ಅವರ ಆರೋಗ್ಯಕ್ಕೆ ಸಂಬಂಧಿಸಿದ ಹೆಲ್ತ್ ಬುಲೆಟಿನ್ ಅನ್ನು ಸಂಜೆ 4.30ಕ್ಕೆ ಬಿಡುಗಡೆ ಮಾಡುವುದಾಗಿ ವೈದ್ಯರು ಘೋಷಿಸಿದ್ದಾರೆ. 

ಇದನ್ನೂ ಓದಿ : Taraka Ratna : ʼಅಣ್ಣನಿಗೆ ಅಸಂಖ್ಯಾತ ಅಭಿಮಾನಿಗಳ ಆರ್ಶೀವಾದ ಇದೆʼ ಗುಣಮುಖರಾಗ್ತಾರೆ

ಆಸ್ಪತ್ರೆಯತ್ತ ತಾರಕರತ್ನ ಅವರ ಕುಟುಂಬಸ್ಥರು ಆಗಮಿಸುತ್ತಿದ್ದಾರೆ. ಎನ್‌ಟಿಆರ್‌ ಕುಟುಂಬದ ಅಭಿಮಾನಿಗಳ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ. ಕಳೆದ ತಿಂಗಳು ಕುಪ್ಪಂನಲ್ಲಿ ನಡೆದ ಟಿಡಿಪಿ ʼಯುವಗಲಂʼ ಪಾದಯಾತ್ರೆಯಲ್ಲಿ ನಟ ತಾರಕ್‌ ರತ್ನ ಅವರು ಭಾಗವಹಿಸಿದ್ದರು. ಪಾದಯಾತ್ರೆ ವೇಳೆ ಕುಸಿದು ಬಿದ್ದಿದ್ದರು. ಸದ್ಯ ಬೆಂಗಳೂರಿನ ನಾರಾಯಣ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಕ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News