ರಾಜಸ್ಥಾನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ "ತಾರಿಣಿ" ಆಯ್ಕೆ 

Written by - Prashobh Devanahalli | Edited by - Manjunath N | Last Updated : Nov 15, 2023, 07:33 PM IST
  • ಗರ್ಭಿಣಿ ಮಹಿಳೆ ಕುರಿತಾದ ಕಥಾ ಸಾರಾಂಶ ಹೊಂದಿರುವ "ತಾರಿಣಿ" ಚಿತ್ರದಲ್ಲಿ ನಿಜವಾಗಿಯೂ ಪ್ರಗ್ನೆಂಟ್ ಆಗಿಯೇ ಮಮತಾ ರಾಹುತ್ ರವರು ಅಭಿನಯಿಸಿದ್ದಾರೆ
  • ಆಗಷ್ಟೇ ಹುಟ್ಟಿದ ಮಮತಾ ರಾಹುತ್ ಅವರ ಮಗುವಿನ ದೃಶ್ಯಗಳೂ 'ತಾರಿಣಿ' ಚಿತ್ರದಲ್ಲಿರುವುದು ವಿಶೇಷ
  • ಈಗಾಗಲೇ ಅನೇಕ ಚಿತ್ರೋತ್ಸವಗಳಿಗೂ ಈ ಚಿತ್ರವನ್ನು ಕಳುಹಿಸಲಾಗಿದೆ
ರಾಜಸ್ಥಾನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ "ತಾರಿಣಿ" ಆಯ್ಕೆ  title=

ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ 'ಸಿದ್ದು ಪೂರ್ಣಚಂದ್ರ'ರವರು ಮತ್ತೊಂದು ಅಂತಹದೇ ಕಥೆ ಚಿತ್ರಕಥೆ  ಬರೆದು ನಿರ್ದೇಶಿಸಿರುವ ಚಿತ್ರ "ತಾರಿಣಿ". ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ "ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್" ಗೆ 'ತಾರಿಣಿ' ಆಯ್ಕೆಯಾಗಿದೆ ಎಂದು ಚಿತ್ರತಂಡದಿಂದ  ಸಂತಸದ ಸುದ್ದಿ ಹೊರಬಂದಿದೆ.

ಇದನ್ನೂ ಓದಿ- ಕೊಳಕು ಮಂಡಲ ಕಾಂಗ್ರೆಸ್ಸಿಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು: ಎಚ್‌ಡಿ‌ಕೆ

ಜನವರಿ ತಿಂಗಳಲ್ಲಿ ರಾಜಸ್ಥಾನದ 'ಜೈಪುರ್" ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳುವರು ಎಂದು ಚಿತ್ರದ ನಿರ್ದೇಶಕ "ಸಿದ್ದು ಪೂರ್ಣಚಂದ್ರ" ರವರು ಮಾಹಿತಿ ಹಂಚಿಕೊಂಡರು. "ಶ್ರೀ ಗಜನಿ ಪ್ರೊಡಕ್ಷನ್ಸ್" ಲಾಂಛನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ, ಜೊತೆಗೆ ಒಂದು ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.

ಇದನ್ನೂ ಓದಿ- ರಾಜ್ಯ ರಾಜಧಾನಿಯ ಗಾಳಿಯೂ ಕಲುಷಿತ ! ಅಪಾಯ ಮಟ್ಟ ತಲುಪಿದ ವಾಯು ಮಾಲಿನ್ಯ 

ಗರ್ಭಿಣಿ ಮಹಿಳೆ ಕುರಿತಾದ ಕಥಾ ಸಾರಾಂಶ ಹೊಂದಿರುವ "ತಾರಿಣಿ" ಚಿತ್ರದಲ್ಲಿ ನಿಜವಾಗಿಯೂ ಪ್ರಗ್ನೆಂಟ್ ಆಗಿಯೇ ಮಮತಾ ರಾಹುತ್ ರವರು ಅಭಿನಯಿಸಿದ್ದಾರೆ.ಆಗಷ್ಟೇ ಹುಟ್ಟಿದ ಮಮತಾ ರಾಹುತ್ ಅವರ ಮಗುವಿನ ದೃಶ್ಯಗಳೂ 'ತಾರಿಣಿ' ಚಿತ್ರದಲ್ಲಿರುವುದು ವಿಶೇಷ. ಈಗಾಗಲೇ ಅನೇಕ ಚಿತ್ರೋತ್ಸವಗಳಿಗೂ ಈ ಚಿತ್ರವನ್ನು  ಕಳುಹಿಸಲಾಗಿದೆ ಎಲ್ಲಾ ಕಡೆಯೂ ಪ್ರದರ್ಶನಗೊಂಡು ಅವಾರ್ಡ್ ಗೆಲ್ಲುವ ನಿರೀಕ್ಷೆಯಿದೆ ಎಂದು ನಿರ್ದೇಶಕರು ಆತ್ಮವಿಶ್ವಾಸ ತೋರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News