ಮತ್ತೆ ಶುರುವಾಗ್ತಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3: ಆಟಗಾರರ ಆಯ್ಕೆ ಪ್ರಕ್ರಿಯೆ ಮುಕ್ತಾಯ

Television Premier League Season-3: ನೆಲಮಂಗಲ ಸಮೀಪದ ಆದಿತ್ಯ ಗ್ಲೋಬಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿಪಿಎಲ್ ಸೀಸನ್-3 ಪ್ಲೇಯರ್ಸ್ ಗಳ ಆಯ್ಕೆ ಮಾಡಲಾಯಿತು. ಬರೋಬ್ಬರಿ 100ಕ್ಕೂ ಹೆಚ್ಚು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.

Written by - Zee Kannada News Desk | Edited by - Bhavishya Shetty | Last Updated : Sep 14, 2023, 01:46 PM IST
    • ಟೆಲಿವಿಷನ್ ಪ್ರೀಮಿಯರ್ ಲೀಗ್ ಮತ್ತೆ ಶುರುವಾಗುತ್ತಿದೆ
    • ಮೂರನೇ ಸೀಸನ್ ಮುಂದಿನ ವರ್ಷ ಜನವರಿ ತಿಂಗಳಲ್ಲಿ ಆರಂಭವಾಗಲಿದೆ
    • ಬರೋಬ್ಬರಿ 100ಕ್ಕೂ ಹೆಚ್ಚು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿ
ಮತ್ತೆ ಶುರುವಾಗ್ತಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3: ಆಟಗಾರರ ಆಯ್ಕೆ ಪ್ರಕ್ರಿಯೆ ಮುಕ್ತಾಯ title=
Television Premier League

Television Premier League Season-3: ಎನ್ 1 ಕ್ರಿಕೆಟ್ ಅಕಾಡೆಮಿ ಕಳೆದೆರೆಡು ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಟೆಲಿವಿಷನ್ ಪ್ರೀಮಿಯರ್ ಲೀಗ್ ಮತ್ತೆ ಶುರುವಾಗುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಪೂರ್ಣಗೊಳಿಸಿದ್ದು, ಮೂರನೇ ಸೀಸನ್ ಮುಂದಿನ ವರ್ಷ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ನೆಲಮಂಗಲ ಸಮೀಪದ ಆದಿತ್ಯ ಗ್ಲೋಬಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿಪಿಎಲ್ ಸೀಸನ್-3 ಪ್ಲೇಯರ್ಸ್ ಗಳ ಆಯ್ಕೆ ಮಾಡಲಾಯಿತು. ಬರೋಬ್ಬರಿ 100ಕ್ಕೂ ಹೆಚ್ಚು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಪೋರ್ನ್ ವಿಡಿಯೋ ನೋಡುವುದು ಅಪರಾಧವೇ? ಕಾನೂನುಗಳ ಬಗ್ಗೆ ಈಗಲೇ ತಿಳಿದುಕೊಳ್ಳಿ

ಈ ಬಗ್ಗೆ ಮಾತನಾಡಿದ ಟಿಪಿಎಲ್ ಆಯೋಜಕ ಸುನಿಲ್ ಕುಮಾರ್ ಬಿ ಆರ್, “ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗುತ್ತಿರುವ ಎಲ್ಲರಿಗೂ ಒಳ್ಳೆದಾಗಲಿ. ಸೆಲೆಬ್ರಿಟಿಗಳ ಸಪೋರ್ಟ್ ಇಲ್ಲದೇ ಏನೂ ಆಗುವುದಿಲ್ಲ. ನಾವು ಕರೆ ಮಾಡಿದ ತಕ್ಷಣ ರೆಸ್ಪಾನ್ಸ್ ಮಾಡುತ್ತಾರೆ. ಅವರ ಬೆಂಬಲದಿಂದ ಪಂದ್ಯಾವಳಿ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಪ್ಟನ್, ಓನರ್ಸ್ ಹಾಗೂ ಮಾಧ್ಯಮದವರು ಎಲ್ಲರು ಬೆಂಬಲಿಸುತ್ತಿದ್ದಾರೆ” ಎಂದರು.

ಇದನ್ನೂ ಓದಿ: ಟೀಂ ಇಂಡಿಯಾ ಮ್ಯಾಚ್ ಫಿಕ್ಸಿಂಗ್ ಮಾಡಿದೆ ಎಂದವರಿಗೆ ಮುಟ್ಟಿನೋಡಿಕೊಳ್ಳುವಂತೆ ಉತ್ತರ ಕೊಟ್ಟ ಶೋಯೆಬ್

“ಈ ಬಾರಿಯ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3ನಲ್ಲಿ ಮಾಧ್ಯಮದವರಿಗೂ ಅವಕಾಶ ನೀಡಲಾಗಿದೆ. ಜೆರ್ಸಿ , ತಂಡಗಳು, ಆಟಗಾರರು, ಮತ್ತಿತರ ಅಪ್ ಡೇಟ್ ಬಗ್ಗೆ ಒಂದೊಂದಾಗಿ ತಿಳಿಸಲಾಗುತ್ತದೆ. ವಿಶೇಷ ಎಂದರೆ ಮ್ಯಾನ್ ಆಫ್ ದಿ ಸೀರಿಸ್ ಪಟ್ಟ ಪಡೆದವರಿಗೆ ಕಾರು, ಆರೆಂಜ್ ಕ್ಯಾಪ್ ಹೋಲ್ಡರ್(batsman), ಪರ್ಪಲ್ ಕ್ಯಾಪ್ ಹೋಲ್ಡರ್(bowler) ಪಡೆದವರಿಗೆ ಬೈಕ್ ಕೊಡಲಾಗುತ್ತದೆ” ಎಂದು ಪಂದ್ಯಾವಳಿ ಆಯೋಜಕ ಸುನಿಲ್ ಕುಮಾರ್ ಬಿ.ಆರ್. ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News