Television Premier League Season-3: ಎನ್ 1 ಕ್ರಿಕೆಟ್ ಅಕಾಡೆಮಿ ಕಳೆದೆರೆಡು ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಟೆಲಿವಿಷನ್ ಪ್ರೀಮಿಯರ್ ಲೀಗ್ ಮತ್ತೆ ಶುರುವಾಗುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಪೂರ್ಣಗೊಳಿಸಿದ್ದು, ಮೂರನೇ ಸೀಸನ್ ಮುಂದಿನ ವರ್ಷ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ನೆಲಮಂಗಲ ಸಮೀಪದ ಆದಿತ್ಯ ಗ್ಲೋಬಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿಪಿಎಲ್ ಸೀಸನ್-3 ಪ್ಲೇಯರ್ಸ್ ಗಳ ಆಯ್ಕೆ ಮಾಡಲಾಯಿತು. ಬರೋಬ್ಬರಿ 100ಕ್ಕೂ ಹೆಚ್ಚು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಪೋರ್ನ್ ವಿಡಿಯೋ ನೋಡುವುದು ಅಪರಾಧವೇ? ಕಾನೂನುಗಳ ಬಗ್ಗೆ ಈಗಲೇ ತಿಳಿದುಕೊಳ್ಳಿ


ಈ ಬಗ್ಗೆ ಮಾತನಾಡಿದ ಟಿಪಿಎಲ್ ಆಯೋಜಕ ಸುನಿಲ್ ಕುಮಾರ್ ಬಿ ಆರ್, “ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗುತ್ತಿರುವ ಎಲ್ಲರಿಗೂ ಒಳ್ಳೆದಾಗಲಿ. ಸೆಲೆಬ್ರಿಟಿಗಳ ಸಪೋರ್ಟ್ ಇಲ್ಲದೇ ಏನೂ ಆಗುವುದಿಲ್ಲ. ನಾವು ಕರೆ ಮಾಡಿದ ತಕ್ಷಣ ರೆಸ್ಪಾನ್ಸ್ ಮಾಡುತ್ತಾರೆ. ಅವರ ಬೆಂಬಲದಿಂದ ಪಂದ್ಯಾವಳಿ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಪ್ಟನ್, ಓನರ್ಸ್ ಹಾಗೂ ಮಾಧ್ಯಮದವರು ಎಲ್ಲರು ಬೆಂಬಲಿಸುತ್ತಿದ್ದಾರೆ” ಎಂದರು.


ಇದನ್ನೂ ಓದಿ: ಟೀಂ ಇಂಡಿಯಾ ಮ್ಯಾಚ್ ಫಿಕ್ಸಿಂಗ್ ಮಾಡಿದೆ ಎಂದವರಿಗೆ ಮುಟ್ಟಿನೋಡಿಕೊಳ್ಳುವಂತೆ ಉತ್ತರ ಕೊಟ್ಟ ಶೋಯೆಬ್


“ಈ ಬಾರಿಯ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3ನಲ್ಲಿ ಮಾಧ್ಯಮದವರಿಗೂ ಅವಕಾಶ ನೀಡಲಾಗಿದೆ. ಜೆರ್ಸಿ , ತಂಡಗಳು, ಆಟಗಾರರು, ಮತ್ತಿತರ ಅಪ್ ಡೇಟ್ ಬಗ್ಗೆ ಒಂದೊಂದಾಗಿ ತಿಳಿಸಲಾಗುತ್ತದೆ. ವಿಶೇಷ ಎಂದರೆ ಮ್ಯಾನ್ ಆಫ್ ದಿ ಸೀರಿಸ್ ಪಟ್ಟ ಪಡೆದವರಿಗೆ ಕಾರು, ಆರೆಂಜ್ ಕ್ಯಾಪ್ ಹೋಲ್ಡರ್(batsman), ಪರ್ಪಲ್ ಕ್ಯಾಪ್ ಹೋಲ್ಡರ್(bowler) ಪಡೆದವರಿಗೆ ಬೈಕ್ ಕೊಡಲಾಗುತ್ತದೆ” ಎಂದು ಪಂದ್ಯಾವಳಿ ಆಯೋಜಕ ಸುನಿಲ್ ಕುಮಾರ್ ಬಿ.ಆರ್. ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ