ಆಗಸ್ಟ್ 18 ರಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್ ಆರಂಭ

ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. 

Written by - Zee Kannada News Desk | Last Updated : Aug 12, 2022, 08:57 AM IST
  • ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು,
  • ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.
ಆಗಸ್ಟ್ 18 ರಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್ ಆರಂಭ  title=

ಬೆಂಗಳೂರು: ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ.

ಹಿರಿಯ ಕಲಾವಿದರ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್. ಈ ಬಗ್ಗೆ ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ವೀರಪ್ಪನ್ ತಾಣವಾಗಿದ್ದ ಈ ಊರು ಇಂದು ಯೋಧರ ಗ್ರಾಮ.. ಇಲ್ಲಿದೆ ಸೇನಾ ತರಬೇತಿ ಅಕಾಡೆಮಿ

ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. No description available.

ಇದನ್ನೂ ಓದಿ: ಕೋವಿಡ್‌ ಲಸಿಕೆಯ ಮೂರನೇ ಡೋಸ್‌ ಪಡೆದವರು 17% ಮಾತ್ರ : ಸಚಿವ ಸುಧಾಕರ್‌

ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು. 

ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News