ರಿಲೀಸ್ ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್ !ತೆಲುಗಿನಲ್ಲೂ ಪೃಥ್ವಿ-ಮಿಲನಾ

ಯುವ ಪ್ರತಿಭೆ ನವೀನ್ ದ್ವಾರಕಾನಾಥ್ ನಿರ್ದೇಶನದ, ನವೀನ್ ರಾವ್  ನಿರ್ಮಾಣದ, ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಅಭಿನಯದ, ಫಾರ್ ರಿಜಿಸ್ಟ್ರೇಷನ್ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಭಾರೀ ಮೊತ್ತಕ್ಕೆ ಡಬ್ಬಿಂಗ್ ರೈಟ್ಸ್ ಪಡೆದುಕೊಂಡಿದ್ದಾರೆ.

Written by - Ranjitha R K | Last Updated : Feb 22, 2024, 06:13 PM IST
  • ತೆಲುಗಿನಲ್ಲಿಯೂ ಫಾರ್ ರಿಜಿಸ್ಟ್ರೇಷನ್
  • ಭಾರೀ ಮೊತ್ತಕ್ಕೆ ಸೇಲ್ ಡಬ್ಬಿಂಗ್ ರೈಟ್ಸ್
  • ಟಾಲಿವುಡ್ ನತ್ತ ಪೃಥ್ವಿ-ಮಿಲನಾ
ರಿಲೀಸ್ ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್ !ತೆಲುಗಿನಲ್ಲೂ ಪೃಥ್ವಿ-ಮಿಲನಾ title=

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎದ್ದಿದೆ. ಪ್ರತಿಭಾವಂತ ಹೊಸಬರು ಮಾಡುತ್ತಿರುವ ಹೊಸ ಹೊಸ ಪ್ರಯೋಗಗಳಿಗೆ ಕನ್ನಡ ಪ್ರೇಕ್ಷಕರು ಮಾತ್ರ ಅಲ್ಲ, ಪಕ್ಕದ ರಾಜ್ಯದವರೂ ಫಿದಾ ಆಗುತ್ತಿದ್ದಾರೆ. ಬಾಲಿವುಡ್ ಮಂದಿ ಕೂಡ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಇಲ್ಲಿ ಇಷ್ಟೆಲ್ಲಾ ಪೀಠಿಕೆ ಹಾಕುತ್ತಿರುವುದಕ್ಕೆ ಕಾರಣ ಫಾರ್ ರಿಜಿಸ್ಟ್ರೇಷನ್ ಸಿನಿಮಾ.

ಯುವ ಪ್ರತಿಭೆ ನವೀನ್ ದ್ವಾರಕಾನಾಥ್ ನಿರ್ದೇಶನದ, ನವೀನ್ ರಾವ್  ನಿರ್ಮಾಣದ, ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಅಭಿನಯದ, ಫಾರ್ ರಿಜಿಸ್ಟ್ರೇಷನ್ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಭಾರೀ ಮೊತ್ತಕ್ಕೆ ಡಬ್ಬಿಂಗ್ ರೈಟ್ಸ್ ಪಡೆದುಕೊಂಡಿದ್ದಾರೆ. 

ಇದನ್ನೂ ಓದಿ : ಸ್ಯಾಂಡಲ್‌ವುಡ್‌ನಲ್ಲಿ ದೊಡ್ಮನೆ ಕುಡಿ ಅಬ್ಬರ ಶುರು : ಅಧಿಕ ಮೊತ್ತಕ್ಕೆ ʼಯುವʼ ಆಡಿಯೋ ಹಕ್ಕು ಮಾರಾಟ

ಶಿವಣ್ಣ ನಟನೆಯ 125ನೇ ಸಿನಿಮಾದ ವೇದವನ್ನು ಅಖಂಡ ತೆಲುಗು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಿದ್ದ ಎಂವಿಆರ್ ಕೃಷ್ಣ ಫಾರ್ ರಿಜಿಸ್ಟ್ರೇಷನ್ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಡಬ್ಬಿಂಗ್ ರೈಟ್ಸ್ ಸೇಲ್ ಆಗಿರುವುದು ಚಿತ್ರತಂಡ ಖುಷಿಯನ್ನು ದುಪ್ಪಟ್ಟು ಮಾಡಿದೆ. 

ಟ್ರೇಲರ್ ಹಾಗೂ ಹಾಡಿನ ಮೂಲಕ ಆಮಂತ್ರಣ ಕೊಟ್ಟಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾ ನಾಳೆ ತೆರೆಗೆ ಬರುತ್ತಿದೆ. ಸಂಬಂಧ ಮಹತ್ವ ಸಾರುವ ಈ ಚಿತ್ರದಲ್ಲಿ ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. 

ಇದನ್ನೂ ಓದಿ : Trisha Krishnan: ಎಐಎಡಿಎಂಕೆಯ ಎ ವಿ ರಾಜು ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ತ್ರಿಷಾ!

ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲಂಸ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News