ಶಾರುಖ್ ಅಭಿನಯದ 'ಜವಾನ್' ಚಿತ್ರದಲ್ಲಿ ದಳಪತಿ ವಿಜಯ್!

Jawan Movie: ಶಾರುಖ್ ಖಾನ್ ಅಭಿನಯದ 'ಜವಾನ್' ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ಹೀರೋ ವಿಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಬಾಲಿವುಡ್ ಹಾಗೂ ಕಾಲಿವುಡ್ ಪ್ರೇಕ್ಷಕರಲ್ಲಿ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.   

Written by - Chetana Devarmani | Last Updated : Jul 26, 2023, 11:38 AM IST
  • ಶಾರುಖ್ ಖಾನ್ ಅಭಿನಯದ 'ಜವಾನ್'
  • ಜವಾನ್ ಚಿತ್ರದಲ್ಲಿ ತಮಿಳು ನಟ ದಳಪತಿ ವಿಜಯ್
  • ಕಾಲಿವುಡ್ ಸ್ಟಾರ್ ಡೈರೆಕ್ಟರ್ ಅಟ್ಲಿ ನಿರ್ದೇಶನದ ಸಿನಿಮಾ
ಶಾರುಖ್ ಅಭಿನಯದ 'ಜವಾನ್' ಚಿತ್ರದಲ್ಲಿ ದಳಪತಿ ವಿಜಯ್!   title=
Jawan

Thalapathy Vijay in Jawan Movie: ಬಾಲಿವುಡ್ ಸ್ಟಾರ್ ಹೀರೋ ಶಾರುಖ್ ಖಾನ್ ಅಭಿನಯದ ಹಾಗೂ ಕಾಲಿವುಡ್ ಸ್ಟಾರ್ ಡೈರೆಕ್ಟರ್ ಅಟ್ಲಿ ನಿರ್ದೇಶನದ ಸಿನಿಮಾ 'ಜವಾನ್'. ಇದರಲ್ಲಿ ಶಾರುಖ್ ಎದುರು ನಯನತಾರಾ ನಟಿಸುತ್ತಿದ್ದಾರೆ. ಪಠಾಣ್ ನಂತರ ಶಾರುಖ್ ಅಭಿನಯದ ಚಿತ್ರ ಇದಾಗಿರುವುದರಿಂದ ಈ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಸುದ್ದಿಯೊಂದು ಹರಿದಾಡುತ್ತಿದೆ.

ಈ ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ಹೀರೋ ವಿಜಯ್ ದಳಪತಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು 'ಜವಾನ್' ಚಿತ್ರದ ಸಾಹಸ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿರುವ ಯಾನಿಕಾ ಬೆನ್ ಖಚಿತಪಡಿಸಿದ್ದಾರೆ. ಜೊತೆಗೆ ಈ ಚಿತ್ರದಲ್ಲಿ ಶಾರುಖ್ ಮತ್ತು ವಿಜಯ್ ನಡುವೆ ಆ್ಯಕ್ಷನ್ ದೃಶ್ಯವಿದ್ದು, ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡಲಿದೆ ಎಂದು ಬೆನ್ ಹೇಳಿದ್ದಾರೆ.ಕಿಂಗ್‌ ಖಾನ್ ಅಭಿಮಾನಿಗಳು ಹಾಗೂ ದಳಪತಿ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ : ಈ ನಟಿಯರ ಅಂದಕ್ಕೆ ಕುತ್ತು ತಂದ ಪ್ಲಾಸ್ಟಿಕ್ ಸರ್ಜರಿ

ಈ ಸಿನಿಮಾ 200 ​​ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಈಗಾಗಲೇ ಈ ಸಿನಿಮಾದಿಂದ ಬಿಡುಗಡೆಯಾಗಿರುವ ಪೋಸ್ಟರ್ ಗಳು ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿವೆ. ಈ ಪೋಸ್ಟರ್‌ಗಳಲ್ಲಿ ಶಾರುಖ್ ಗಡ್ಡ ಸೇರಿದಂತೆ ಹಲವು ವಿಭಿನ್ನ ಲುಕ್‌ಗಳಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಆಕರ್ಷಿಸಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರವು ಸೆಪ್ಟೆಂಬರ್ 07 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಇದು ಹಿಂದಿ ಜೊತೆಗೆ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸದ್ಯ ಈ ಚಿತ್ರ ಪ್ಯಾಚ್ ವರ್ಕ್ ಮುಗಿಸುತ್ತಿದೆ. ಈ ಸಿನಿಮಾ ಬಿಡುಗಡೆಗೂ ಮುನ್ನ 300 ಕೋಟಿಯವರೆಗೂ ಲಾಭ ಗಳಿಸಿದೆಯಂತೆ.

ಇದನ್ನೂ ಓದಿ : ʼಕರೀನಾ ಕಪೂರ್‌ʼ ವರ್ತನೆಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಬೇಸರ..! ವಿಡಿಯೋ ವೈರಲ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News