ಮಾನ್ಸೂನ್ ವೇಳೆಗೆ `ಭಗೀರಥ`ನ ಆಗಮನ.. ಕುತೂಹಲ ಮೂಡಿಸಿದೆ ವಿಭಿನ್ನ ಕಥಾಹಂದರ ಹೊಂದಿರುವ ಟೀಸರ್!
Bhagirath: ಧರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು `ಭಗೀರಥ`. ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು ` ಭಗೀರಥ ` ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು `ಭಗೀರಥ` ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.
ಕಳೆದ ಸೆಪ್ಟೆಂಬರ್ ನಲ್ಲಿ ನಮ್ಮ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಈಗ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗಿದೆ. ಮಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರತಂಡದ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. "ಬಾಯ್ ಫ್ರೆಂಡ್" ಚಿತ್ರದಿಂದ ನಾನು ನಿರ್ದೇಶಕನಾದೆ. "ಭಗೀರಥ" ನನ್ನ ನಿರ್ದೇಶನದ ಐದನೇ ಚಿತ್ರ. ಇದೊಂದು ಪ್ರಸ್ತುತ ರಾಜಕಾರಣದ ಕಥಾಹಂದರ ಹೊಂದಿರುವ ಹಾಗೂ ಪತ್ರಕರ್ತರೊಬ್ಬರ ಸುತ್ತ ನಡೆಯುವ ಕಥೆ. ಇಂದು ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಎನ್ ಎಂ ಸುರೇಶ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ರಾಮ್ ಜನಾರ್ದನ್.
ಜರ್ನಿಲಿಸಂ ಮಾಡಿ ಪತ್ರಕರ್ತನಾಗಿದ್ದ ನಾನು, "ಜಮಾನ" ಚಿತ್ರದ ಮೂಲಕ ನಟನಾದೆ ಎಂದು ಮಾತನಾಡಿದ ನಾಯಕ ಜಯಪ್ರಕಾಶ್ ಅವರು, "ಭಗೀರಥ" ನನ್ನ ಮೂರನೇಯ ಚಿತ್ರ. "ಸೂರ್ಯಪ್ರಕಾಶ್" ನನ್ನ ಪಾತ್ರದ ಹೆಸರು. ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. "ಭಗೀರಥ" ಹೆಸರಿಗೆ ತಕ್ಕಂತೆ ನೀರಿಗೆ ಸಂಬಂಧಿಸಿದ ಕಥೆಯೂ ಈ ಚಿತ್ರದಲ್ಲಿದೆ ಎಂದರು.
ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ಸದ್ಯದಲ್ಲೇ ಚಿತ್ರ ಬಿಡುಗಡೆ ಮಾಡುತ್ತೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕರಾದ ಕೆ.ರಮೇಶ್ ಹಾಗೂ ಬಿ.ಭೈರಪ್ಪ.
ನಾನು ನಾಯಕನ ಸೋದರತ್ತೆಯ ಮಗಳ ಪಾತ್ರದಲ್ಲಿ ನಟಿಸಿದ್ದೇನೆ ಎಂದು ನಟಿ ಶ್ರೀಯಾ ಪಾವನಿ ತಿಳಿಸಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ ಹಾಗೂ ಛಾಯಾಗ್ರಹಣದ ಕುರಿತು ಸೂರಿ ಚಿತ್ತೂರು ಮಾಹಿತಿ ನೀಡಿದರು.
ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ, ಸುರಭಿ ರವಿ, ಶ್ರೀಯಾ ಪಾವನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.