ಕರುನಾಡ ‌ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹುನಿರೀಕ್ಷಿತ "45" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ಫೋಟೋದಲ್ಲಿ 64 ಮಧ್ಯೆಯಿರುವ 46 ಸಂಖ್ಯೆ ಎಲ್ಲಿದೆ ಅಂತ ಕಂಡುಹಿಡಿಯುವಿರಾ?


ಈ ನಡುವೆ ಚಿತ್ರತಂಡದಿಂದ ಮಹತ್ವದ ಸುದ್ದಿ ಹೊರಬಂದಿದೆ. "45" ಚಿತ್ರದ ಆಡಿಯೋ ರೈಟ್ಸ್ ಅನ್ನು ಪ್ರತಿಷ್ಟಿತ  ಆನಂದ್ ಆಡಿಯೋ ಸಂಸ್ಥೆಯವರು  ಪಡೆದುಕೊಂಡಿದ್ದಾರೆ. ಚಿತ್ರದ ನಿರ್ದೇಶಕರೂ ಆಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೇ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ‌. ಭಾರಿ ಮೊತ್ತಕ್ಕೆ ಆಡಿಯೋ ‌ರೈಟ್ಸ್ ಮಾರಾಟವಾಗಿದ್ದು ಸದ್ಯದಲ್ಲೇ ಹಾಡುಗಳು ಬಿಡುಗಡೆಯಾಗಲಿದೆ.    


ಇದನ್ನೂ ಓದಿ: ವರ್ಷದಲ್ಲಿ ಒಮ್ಮೆಯಷ್ಟೇ ಸಿಗುವ ಈ ಹಣ್ಣನ್ನು ತಿಂದರೆ ಕಣ್ಣಿನ ದೃಷ್ಟಿ ಎಷ್ಟೇ ಮಂದವಾಗಿದ್ದರೂ ಶಾರ್ಪ್‌ ಆಗುತ್ತೆ! ಬ್ಲಡ್‌ ಶುಗರ್‌ ನಿಯಂತ್ರಿಸಲು ಸಹ ಇದು ರಾಮಬಾಣ


ಸದಭಿರುಚಿಯ ಚಿತ್ರಗಳ ನಿರ್ಮಾಪಕ ರಮೇಶ್ ರೆಡ್ಡಿ ಅವರ ನಿರ್ಮಾಣ, ಮ್ಯೂಸಿಕಲ್ ಮಾಂತ್ರಿಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಶಿವರಾಜ್‌ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅಭಿನಯದಲ್ಲಿ ಅದ್ದೂರಿಯಾಗಿ‌ ಮೂಡಿಬರುತ್ತಿರುವ "45" ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ