ಕರಾವಳಿ ಭಾಗದ ಕಥಾಹಂದರ ಹೊಂದಿರುವ `ಕುದ್ರು` ಚಿತ್ರ ಅಕ್ಟೋಬರ್ 13 ರಂದು ತೆರೆಗೆ
Kudru Film Release: ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು.
Kudru Film Release Date: ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ "ಕುದ್ರು" ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.
"ಕುದ್ರು" ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ & ನಿರ್ದೇಶಕ ಭಾಸ್ಕರ್ ನಾಯ್ಕ್, ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಉಡುಪಿ, ಮಲೆನಾಡು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ(ರಿಗ್) ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಜನಪ್ರಿಯವಾಗಿದೆ ಎಂದರು.
ಇದನ್ನೂ ಓದಿ- ರಶ್ಮಿಕಾ ಮಂದಣ್ಣ ಅಷ್ಟೇ ಬ್ಯೂಟಿಫುಲ್ ಅವರ ತಾಯಿ.. ಫೋಟೋ ನೋಡಿ ದೃಷ್ಟಿ ತೆಗೀರಿ ಅಂದ್ರು ನೆಟ್ಟಿಜನ್
ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ಕಾಣಿಸಿಕೊಂಡಿರುವುದಾಗಿ ನಟಿ ಡೈನ ಡಿಸೋಜ ತಿಳಿಸಿದರು. ನನ್ನದು ಈ ಚಿತ್ರದಲ್ಲಿ ಮುಸ್ಲಿಂ ಹುಡುಗನ ಪಾತ್ರವೆಂದು ನಟ ಫರ್ಹಾನ್ ತಿಳಿಸಿದರು. ಈ ಸಂದರ್ಭದಲ್ಲಿ ಸಿನಿಮಾ ಚಿತ್ರೀಕರಣವಾದ ಸ್ಥಳಗಳ ಬಗ್ಗೆ ಛಾಯಾಗ್ರಾಹಕ ಶ್ರೀ ಪುರಾಣಿಕ್ ಮಾಹಿತಿ ನೀಡಿದರು .
"ಕುದ್ರು" ಚಿತ್ರದಲ್ಲಿ ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನಾಗಿ ಗಾಡ್ವಿನ್ ಹಾಗೂ ಬ್ರಾಹ್ಮಣ ಹುಡುಗಿ ಪಾತ್ರದಲ್ಲಿ ನಾಯಕಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ.
ಇದನ್ನೂ ಓದಿ- ಕೋಪಗೊಂಡು ವೇದಿಕೆಯಿಂದಲೇ ಕೆಳಗಿಳಿದು ಬಂದ ಸುದೀಪ್..!
ಪ್ರತೀಕ್ ಕುಂದು ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ "ಕುದ್ರು" ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.