Juliet 2 Movie First Look: ಕುತೂಹಲ ಮೂಡಿಸಿದೆ ‘ಜೂಲಿಯೆಟ್ 2’ ಚಿತ್ರದ ಫಸ್ಟ್ ಲುಕ್

Juliet 2 Movie First Look: ‘ನೆನಪಿರಲಿ’ ಪ್ರೇಮ್ ಅಭಿನಯದ "ಪ್ರೇಮ ಪೂಜ್ಯಂ" ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬೃಂದಾ ಆಚಾರ್ಯ "ಜೂಲಿಯೆಟ್ 2" ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇವರೆ ಜೂಲಿಯೆಟ್ ಪಾತ್ರಧಾರಿ ಕೂಡ. ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಕೂಡ ವಿರಾಟ್ ಅವರದ್ದೆ.

Written by - YASHODHA POOJARI | Edited by - Bhavishya Shetty | Last Updated : Dec 27, 2022, 10:13 AM IST
    • ಜೂಲಿಯೆಟ್ 2’ ಸಿನಿಮಾ ಪಿಎಲ್ ಪ್ರೊಡಕ್ಷನ್ ಲಾಂಛನದಡಿಯಲ್ಲಿ ನಿರ್ಮಾಣ
    • ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಕುತೂಹಲ ಹೆಚ್ಚಿಸಿದೆ
    • ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ
Juliet 2 Movie First Look: ಕುತೂಹಲ ಮೂಡಿಸಿದೆ ‘ಜೂಲಿಯೆಟ್ 2’ ಚಿತ್ರದ ಫಸ್ಟ್ ಲುಕ್ title=
Juliet

Juliet 2 Movie First Look: ವಿಶ್ವಮಟ್ಟದಲ್ಲಿ ಕನ್ನಡ ಚಿತ್ರಗಳು ಗುರುತಿಸಲ್ಪಡುತ್ತಿದೆ. ಇದೇ  ಸಂದರ್ಭದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ‘ಜೂಲಿಯೆಟ್ 2’ ಸಹ  ಪಿಎಲ್ ಪ್ರೊಡಕ್ಷನ್ ಲಾಂಛನದಡಿಯಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಕುತೂಹಲ ಹೆಚ್ಚಿಸಿದೆ.

‘ನೆನಪಿರಲಿ’ ಪ್ರೇಮ್ ಅಭಿನಯದ "ಪ್ರೇಮ ಪೂಜ್ಯಂ" ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬೃಂದಾ ಆಚಾರ್ಯ "ಜೂಲಿಯೆಟ್ 2" ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇವರೆ ಜೂಲಿಯೆಟ್ ಪಾತ್ರಧಾರಿ ಕೂಡ.

ಇದನ್ನೂ ಓದಿ: Tunisha Suicide Case: ‘ಲವ್ ಜಿಹಾದ್’ಗೆ ಬಲಿಯಾದ್ರಾ ಯುವ ನಟಿ ತುನೀಶಾ ಶರ್ಮಾ?

ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಕೂಡ ವಿರಾಟ್ ಅವರದ್ದೆ.

ಲಿಖಿತ್ ಆರ್ ಕೋಟ್ಯಾನ್ ನಿರ್ಮಿಸಿರುವ ಈ ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಮಂಗಳೂರು, ಬೆಳ್ತಂಗಡಿ ಹಾಗೂ ಅದರ ಸುತ್ತಲ್ಲಿನ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆದಿದೆ.

ನಗರವಾಸಿಯಾದ ಮಗಳು, ತನ್ನ ತಂದೆಯ ಕೊನೆಯ ಆಸೆ ಈಡೇರಿಸಲು ಹುಟ್ಟೂರಿಗೆ ಹೋಗಿ ನೆಲೆಸುತ್ತಾಳೆ. ಅಲ್ಲಿ ಏನೆಲ್ಲಾ ಆಗುತ್ತದೆ ಹಾಗೂ ಹೆಣ್ಣು ಶಾಂತರೂಪಿಯಾದ ಶಾರದೆಯ ರೀತಿ ಇರುತ್ತಾಳೆ. ಆದರೆ ತನಗೆ ತೊಂದರೆಯಾದಾಗ ಆಕೆ ದುರ್ಗೆಯೂ ಆಗುತ್ತಾಳೆ ಎಂಬುದು ಈ ಚಿತ್ರದ ಕಥಾಹಂದರ.

ಬೃಂದಾ ಆಚಾರ್ಯ, ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ, ರಾಧೇಶ್ ಶೆಣೈ, ಶ್ರೀಕಾಂತ್, ರಾಯ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಚಿನ್ ಬಸ್ರೂರ್ ಅವರ ಸಂಗೀತ ಹಾಗೂ shanto v anto ಅವರ ಛಾಯಾಗ್ರಹಣ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ: Sreeleela: ಮೊದಲ ಬಾರಿ ಲೈವ್ ಬಂದು ಸಪ್ರೈಸ್ ಕೊಟ್ಟ ಶ್ರೀಲೀಲಾ!

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ‌. ಮೊದಲು "ಜೂಲಿಯೆಟ್ 2" ಫೆಬ್ರವರಿ ವೇಳೆಗೆ ತೆರೆಗೆ ಬರಲಿದೆ. ಆನಂತರ ಮೊದಲ ಭಾಗ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ವಿರಾಟ್ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News