ಕಮಲ್ ಹಾಸನ್ - ಮಣಿರತ್ನಂ ಕಾಂಬಿನೇಷನ್ನಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಥಗ್ ಲೈಫ್ನ ಮೊದಲ ಹಾಡು ಬಿಡುಗಡೆಯಾಗಿದೆ

ಮೂರು ದಶಕದ ನಂತರ ಕಮಲ್ ಹಾಸನ್ - ಮಣಿರತ್ನಂ ಕಾಂಬಿನೇಷನ್ನಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಥಗ್ ಲೈಫ್. ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.
ಥಗ್ ಲೈಫ್ ಚಿತ್ರದ ಜಿಂಗುಚ್ಚಾ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್ ಹಾಸನ್ ಸಾಹಿತ್ಯ ಒದಗಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಎಲ್ಲರನ್ನೂ ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ. ಚೆನ್ನೈನಲ್ಲಿ ನಡೆದ ಪ್ಯಾನ್ ಇಂಡಿಯಾದ ಪ್ರೆಸ್ ಮೀಟ್ ವೇದಿಕೆಯಲ್ಲಿ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.
ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ತಯಾರಾಗಿದೆ. ಚಿತ್ರದ ತಾರಾಗಣ ಕಮಲ್ ಹಾಸನ್, ಸಿಲಂಬರಸನ್ ಟಿಆರ್, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ ಮತ್ತು ನಾಸರ್ ಮತ್ತಿತರ ನಟರನ್ನು ಒಳಗೊಂಡಿದೆ. ಈ ಬಹು ನಿರೀಕ್ಷಿತ ಚಿತ್ರಕ್ಕೆ ದಿಗ್ಗಜ ಎ.ಆರ್. ರೆಹಮಾನ್ ಅವರ ಸಂಗೀತವಿದೆ.
ಈ ಚಿತ್ರದ ಕತೆ, ಚಿತ್ರಕತೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನದಲ್ಲಿ ರವಿ ಆರ್ ಚಂದ್ರನ್ ಅವರ ಸಿನಿಮಾಟೋಗ್ರಫಿ, ಅನ್ಬರಿವ್ ಅವರ ಆ್ಯಕ್ಷನ್ ಕೋರಿಯಾಗ್ರಫಿ ಈ ಚಿತ್ರಕ್ಕಿದೆ. ಥಗ್ ಲೈಫ್ ಚಿತ್ರದ ಒಟಿಟಿ ಹಕ್ಕು ನೆಟ್ ಫ್ಲಿಕ್ಸ್ ಪಾಲಾಗಿದ್ದು, ಆಡಿಯೋ ಹಕ್ಕನ್ನು ಸರೆಗಮ ತನ್ನದಾಗಿಸಿಕೊಂಡಿದೆ.
ಥಗ್ಸ್ ಲೈಫ್ ಸಿನಿಮಾವನ್ನು ತಮಿಳುನಾಡಿನಲ್ಲಿ ರೆಡ್ ಜೈಂಟ್ ಮೂವೀಸ್ ವಿತರಣೆ ಜವಾಬ್ದಾರಿ ಹೊತ್ತುಕೊಂಡಿದೆ. ಓವರ್ ಸೀಸ್ ನಲ್ಲಿ ಹೋಮ್ ಸ್ಕ್ರೀನ್ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ ಎಪಿ ಇಂಟರ್ನ್ಯಾಷನಲ್ ವಿತರಣೆ ಮಾಡುತ್ತಿದ್ದು, ಉತ್ತರ ಭಾರತದಲ್ಲಿ ಪೆನ್ ಮರುಧರ್ ಸಿನಿ ಎಂಟರ್ಟೈನ್ಮೆಂಟ್, ಆಂಧ್ರಪ್ರದೇಶ ಮತ್ತು ತೆಲಂಗಾಣನಲ್ಲಿ ಶ್ರೇಷ್ಠ್ ಮೂವೀಸ್ ಹಾಗೂ ಫೈವ್ ಸ್ಟಾರ್ ಸೆಂಥಿಲ್ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರ ವಿತರಣೆ ಮಾಡಲಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.