ಹೊಸ ವರ್ಷಕ್ಕೆ ʼಫಾರೆಸ್ಟ್ʼ ಬಿಡುಗಡೆ: ಮಲ್ಟಿ ಸ್ಟಾರರ್ ಸಿನಿಮಾ ಪೋಸ್ಟರ್ ರಿಲೀಸ್... ಡೇಟ್ ಅನೌನ್ಸ್ ಮಾಡಿದ ಚಿತ್ರತಂಡ
Forest Cinema Release Date: ಸಮಾಜಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುವ ಹಂಬಲ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರವನ್ನು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುವ ಸಿದ್ದತೆ ನಡೆಸುತ್ತಿದ್ದಾರೆ.
ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿಸ್ಟಾರರ್ ಸಿನಿಮಾ ಫಾರೆಸ್ಟ್. ಶೀರ್ಷಿಕೆ, ತಾರಾಗಣ, ಕಾನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ "ಫಾರೆಸ್ಟ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2025 ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಇದನ್ನೂ ಓದಿ: ಒಂದು ಲೋಟ ನೀರಿಗೆ ಈ ಪದಾರ್ಥ ಮಿಕ್ಸ್ ಮಾಡಿ ಕುಡಿದರೆ ಕ್ಷಣದಲ್ಲೇ ನಾರ್ಮಲ್ ಆಗುತ್ತೆ ಶುಗರ್! ಮಧುಮೇಹಿಗಳೇ ಒಮ್ಮೆ ಟ್ರೈ ಮಾಡಿ
ಸಮಾಜಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುವ ಹಂಬಲ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರವನ್ನು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುವ ಸಿದ್ದತೆ ನಡೆಸುತ್ತಿದ್ದಾರೆ.
ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆಯನ್ನು ನಿರ್ದೇಶಕ ಚಂದ್ರಮೋಹನ್ ಈ ಚಿತ್ರದ ಮೂಲಕ ವಿಭಿನ್ನವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ. ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ.
ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಇದನ್ನೂ ಓದಿ: ಮಧುಮೇಹಕ್ಕೆ ವರದಾನ ʼಈʼ ಬೀಜ.. ಬಿಸಿಲಲ್ಲಿ ಒಣಗಿಸಿ ತಿಂದ್ರೆ ಜನ್ಮದಲ್ಲೇ ಹೆಚ್ಚಾಗಲ್ಲ ಶುಗರ್! ಕೊಲೆಸ್ಟ್ರಾಲ್ ಕೂಡಾ ಕರಗಿಹೋಗುತ್ತೆ!!
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು "ಫಾರೆಸ್ಟ್" ಚಿತ್ರದಲ್ಲಿ ಅಭಿನಯಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ