ನವದೆಹಲಿ: ಚಿತ್ರ ನಟ ಕಬೀರ್ ಬೇಡಿ ಅವರ ಆತ್ಮಕಥನ ಸ್ಟೋರಿಸ್ ಐ ಮಸ್ಟ್ ಟೆಲ್; ದಿ ಎಮೋಷನಲ್ ಲೈಫ್ ಆಫ್ ಆನ್ ಆಕ್ಟರ್’ ರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಕೃತಿಯ ಪ್ರಕಟಣೆ ಮತ್ತು ಮಾರಾಟಕ್ಕೆ ನಿರ್ಬಂಧ ವಿಧಿಸಲು ಕೋರಿ ಕಬೀರ್ ಬೇಡಿಯ ಹಿರಿಯ ಸಹೋದರ ಟಿ.ಆರ್. ಬೇಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಕಬೀರ್ ಬೇಡಿ ಅವರ ಆತ್ಮ ಕತನವನ್ನು ನಿರ್ಬಂಧಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಟಿ.ಆರ್.ಬೇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ: “ನಾನು ಬಿಗ್ ಬಾಸ್’ಗೆ ಹೋಗೋಕೆ ಕಾರಣ ಅವರು”- ಕಡೆಗೂ ‘ಆ’ ವ್ಯಕ್ತಿ ಯಾರೆಂದು ಸತ್ಯ ಬಾಯ್ಬಿಟ್ಟ ಸಂಗೀತ
ಅಲ್ಲದೆ, ಈ ಮೇಲ್ಮನವಿ ಅರ್ಜಿಯಲ್ಲಿ ಕೇಳಿರುವ ಮನವಿಯನ್ನು ಪರಿಗಣಿಸಲು ಯಾವುದೇ ಆಧಾರವಿಲ್ಲ.ವಿಚಾರಣಾ ನ್ಯಾಯಾಲಯ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿರುವುದಕ್ಕೆ ಕಾರಣ ನೀಡಿದೆ. ಆ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಹಾಗೂ ಮನವಿ ಪುರಸ್ಕರಿಸಲು ಯಾವುದೇ ಮೆರಿಟ್ ಇಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.ಅಲ್ಲದೆ, ವಿಚಾರಣಾ ನ್ಯಾಯಾಲಯ 2022ರ ಸೆ.27ರಂದು ಆದೇಶ ನೀಡಿದೆ.ಬಳಿಕ 9 ತಿಂಗಳ ನಂತರ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಜತೆಗೆ 2021ರಲ್ಲಿಯೇ ಪುಸ್ತಕ ಪ್ರಕಟಗೊಂಡು, ಮಾರಾಟವಾಗಿದೆ.ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಇದನ್ನೂ ಓದಿ: Thalapathy Vijay: ಏನೇ ಆದ್ರೂ ನಾನು ವಿಜಯ್’ಗೆ ಓಟು ಹಾಕಲ್ಲ! ಮುಲಾಜಿಲ್ಲದೆ ಬಹಿರಂಗ ಹೇಳಿಕೆ ಕೊಟ್ಟ ಆ ಸ್ಟಾರ್ ನಟ ಯಾರು?
ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಕಬೀರ್ ಬೇಡಿ ಅವರ ಕೃತಿಯಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿದ್ದಾರೆ, ಹಾಗಾಗಿ ಅವರಿಂದ ವಾರ್ಷಿಕ ಶೇ.24ರ ಬಡ್ಡಿಯಂತೆ 1 ಕೋಟಿ ಪರಿಹಾರ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಅದರಲ್ಲಿ ಕಬೀರ್ ಬೇಡಿ ಹಾಗೂ ಅವರ ಪುಸಕ್ತವನ್ನು ಹೊರತರುತ್ತಿರುವ ವೆಸ್ಟ್ ಲ್ಯಾಂಡ್ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು.
ಜತೆಗೆ ತಮ್ಮ ವಿರುದ್ಧ ಕೃತಿಯಲ್ಲಿ ದಾಖಲಿಸಿರುವ ಅವಹೇಳನಕಾರಿ ಅಂಶಗಳನ್ನು ತೆಗೆದುಹಾಕುವಂತೆ ಕೃತಿಕಾರರು ಮತ್ತು ಪ್ರಕಾಶಕರಿಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.ಕಬೀರ್ ಬೇಡಿ ಅವರು ತಮ್ಮ ಪುಸಕ್ತಗಳು ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಲಿ ಎಂದು ಸಾಕಷ್ಟು ಸುಳ್ಳು ಅಂಶಗಳನ್ನು ದಾಖಲಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು.ಆದರೆ ವಿಚಾರಣಾ ನ್ಯಾಯಾಲಯ, ಪುಸ್ತಕ ಈಗಾಗಲೇ ಪ್ರಕಟಗೊಂಡು ಸಾಕಷ್ಟು ಸಂಖ್ಯೆಯ ಪ್ರತಿಗಳು ಮಾರಾಟವಾಗಿವೆ. ಈ ಹಂತದಲ್ಲಿ ತಡೆ ನೀಡಲಾಗದು ಎಂದು ಹೇಳಿರುವುದಲ್ಲದೆ, ಪುಸ್ತಕದಲ್ಲಿ ಪ್ರಸ್ತಾಪಿಸಲಾಗಿದೆ ಎನ್ನಲಾದ ಅವಹೇಳನಕಾರಿ ಅಂಶಗಳು ನಿಜವೇ ಸುಳ್ಳೇ ಎಂಬುದನ್ನು ಪೂರ್ಣ ಪ್ರಮಾಣದ ವಿಚಾರಣೆ ನಡೆಯಬೇಕಾಗಿದೆ ಎಂದು ಆದೇಶಿಸಿದೆ. ಅಲ್ಲದೆ, ಹಾಗಾಗಿ ಯಾವುದೇ ಮಧ್ಯಂತರ ಆದೇಶ ನೀಡಲಾಗದು, ಒಂದು ವೇಳೆ ಮಧ್ಯಂತರ ತಡೆ ನೀಡಿದರೆ ಅದೇ ಅಂತಿಮ ಆದೇಶವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ