The India House: ಆರ್‌ಆರ್‌ಆರ್ (RRR) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan), ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. 


COMMERCIAL BREAK
SCROLL TO CONTINUE READING

ದಿ ಇಂಡಿಯಾ ಹೌಸ್ (The India House) ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ (Nikhil Siddharth) ನಾಯಕನಾಗಿ ನಟಿಸಲಿದ್ದಾರೆ. ಇಂದು ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ದಿ ಇಂಡಿಯಾ ಹೌಸ್ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.


ಇದನ್ನೂ ಓದಿ- ಕದ್ದು ಮುಚ್ಚಿ ರಾಮ್‌ ಚರಣ್‌ ಮನೆಯಲ್ಲಿದ್ದ ಗುಟ್ಟು ರಟ್ಟು ಮಾಡಿದ ಖ್ಯಾತ ನಟಿ !


ದಿ ಕಾಶ್ಮೀರಿ ಫೈಲ್ಸ್ (The Kashmiri Files), ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ (V Mega Pictures) ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ 'ದಿ ಇಂಡಿಯಾ ಹೌಸ್' ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿರುವ ಈ ಸಿನಿಮಾಗೆ ರಾಮ್ ವಂಶಿ ಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ.  ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ದಾರ್ಥ್ ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ಬಣ್ಣ ಹಚ್ಚಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. 


ಇದನ್ನೂ ಓದಿ- ಕನ್ನಡ ನಟಿಯರಲ್ಲಿ ಅತೀ ಹೆಚ್ಚು ಇನ್ಸ್ಟಾಗಾಮ್‌ ಫಾಲೋವರ್ಸ್‌ ಹೊಂದಿರುವ ನಟಿ ಇವರೇ ನೋಡಿ...


ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರುತ್ತಿರು  ದಿ ಇಂಡಿಯನ್ ಹೌಸ್ ಸಿನಿಮಾಗೆ ಕ್ಯಾಮೆರಾನ್ ಬ್ರೈಸನ್ ಕ್ಯಾಮೆರಾ ಹಿಡಿಯಲಿದ್ದಾರೆ. ಕಾರ್ತಿಕೇಯ 2 ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ದಿ ಇಂಡಿಯಾ ಹೌಸ್ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ. ಈ ಚಿತ್ರದ ರೆಗ್ಯುಲರ್ ಶೂಟಿಂಗ್ ನಾಳೆಯಿಂದ ಶುರುವಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.