ಮಾತಿನಮನೆಯಲ್ಲಿ "ದ ಜಡ್ಜ್ ಮೆಂಟ್" 

Written by - Prashobh Devanahalli | Edited by - Manjunath N | Last Updated : Nov 28, 2023, 05:47 PM IST
  • ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶಿಸಿರುವ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ.
  • ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ. ಅನೂಪ ಸೀಳಿನ ಸಂಗೀತ ಸಂಯೋಜಿಸಿದ್ದಾರೆ.
  • ಈ ಚಿತ್ರದ ಸ್ಕ್ರಿಪ್ಟ್ ಸೂಪರ್ ವೈಸರ್ ಆಗಿ ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.
ಮಾತಿನಮನೆಯಲ್ಲಿ "ದ ಜಡ್ಜ್ ಮೆಂಟ್"  title=

ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.

ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. 

ಇದನ್ನೂ ಓದಿ: ಕೈವ ಸಿನಿಮಾ ಟ್ರೇಲರ್‌ ಲಾಂಚ್‌ ಇವೆಂಟ್‌ನಲ್ಲಿ ಜಾನವಿ ರಾಯಳ

ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ ವಕೀಲರಾಗಿ ಅಭಿನಯಿಸಿದ್ದಾರೆ. ದಿಗಂತ ಮಂಚಾಲೆ, ಮೇಘನಾ ಗಾವಂಕರ, ಧನ್ಯಾ ರಾಮಕುಮಾರ, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ ಬೆಳವಾಡಿ, ಟಿ ಎಸ್ ನಾಗಾಭರಣ,  ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ರವಿಶಂಕರ ಗೌಡ ಸುಜಯ ಶಾಸ್ತ್ರೀ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಂ, ಅಶ್ವಿನ್ ರಾವ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಗುಡ್ ಲೈಫ್ ಥೈರಾಯಿಡ್ ಸಮಸ್ಯೆಯ ಬಗ್ಗೆ ರಿಪೋರ್ಟ್

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶಿಸಿರುವ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ.  ಅನೂಪ ಸೀಳಿನ ಸಂಗೀತ ಸಂಯೋಜಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,  ಕೆಂಪರಾಜ್ ಬಿ ಎಸ್ ಸಂಕಲನವಿರುವ ಈ ಚಿತ್ರದ ಸ್ಕ್ರಿಪ್ಟ್ ಸೂಪರ್ ವೈಸರ್ ಆಗಿ  ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News