ಕರ್ನಾಟಕ ಬಳಿಕ ಗೋವಾದಲ್ಲಿಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ
ಮಧ್ಯಪ್ರದೇಶ, ಗುಜರಾತ್ ಮತ್ತು ಕರ್ನಾಟಕದ ಬಳಿಕ ಇದೀಗ ಗೋವಾದಲ್ಲಿಯೂ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
ನವದೆಹಲಿ: ಮಧ್ಯಪ್ರದೇಶ, ಗುಜರಾತ್ ಮತ್ತು ಕರ್ನಾಟಕದ ಬಳಿಕ ಇದೀಗ ಗೋವಾದಲ್ಲಿಯೂ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಸೋಮವಾರ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಗೋವಾ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ಪ್ರಮೋದ್ ಸಾವಂತ್(Pramod Sawant) ಅವರು ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
ಜಮ್ಮು-ಕಾಶ್ಮೀರ(Jammu and Kashmir)ದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ದೌರ್ಜನ್ಯಗಳ ಕರಾಳ ಮುಖವನ್ನು ಬಿಚ್ಚುಡುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರವನ್ನು ನಿರ್ದೇಶಿಸಿರುವ ವಿವೇಕ್ ಅಗ್ನಿಹೋತ್ರಿ(Vivek Agnihotri)ಗೆ ಪ್ರೇಕ್ಷಕ ಮಹಾಪ್ರಭು ಜೈ ಜೈ ಎಂದಿದ್ದಾರೆ. ಈಗಾಗಲೇ ಗಲ್ಲಾಪೆಟ್ಟಿಯಲ್ಲಿ ಸಖತ್ ಸದ್ದು ಮಾಡುತ್ತಿರುವ ಈ ಸಿನಿಮಾ ಬಾಲಿವುಡ್ ನಲ್ಲಿ ದಾಖಲೆ ಬರೆಯುತ್ತಿದೆ.
Puneeth Rajkumar : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
ಸ್ವತಃ ಪ್ರಧಾನಿ ಮೋದಿ(PM Modi) ಅವರೇ ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರ(Kashmiri Pandits) ಜೀವನ ಕಥನವು ಪ್ರೇಕ್ಷಕರಿಗೆ ಇಷ್ಟವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಜನರು ಈ ಚಿತ್ರವನ್ನು ವೀಕ್ಷಿಸಿ ಕಾಶ್ಮೀರಿ ಪಂಡಿತರ ಬಗೆಗಿನ ಸಂತ್ಯಾಂಶವನ್ನು ತಿಳಿದುಕೊಳ್ಳಲಿ ಎಂದು ಮಧ್ಯಪ್ರದೇಶ, ಗುಜರಾತ್ ಮತ್ತು ಕರ್ನಾಟಕ ತೆರಿಗೆ ವಿನಾಯಿತಿ ಘೋಷಿಸಿದ್ದವು. ಈಗ ಇದೇ ರಾಜ್ಯಗಳ ಹಾದಿಯಲ್ಲಿ ನಡೆದಿರುವ ಗೋವಾ ಕೂಡ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.
ಧರೆಗಿಳಿದ ಸಿನಿಮಾ ಸ್ವರ್ಗಲೋಕ..! ಎಲ್ಲೆಲ್ಲೂ ಕಾಣುತ್ತಿದ್ದಾರೆ ಡಾ. ಪುನೀತ್ ರಾಜ್‌ಕುಮಾರ್..!
ನೈಜ ಘಟನೆಗಳ ಆಧಾರಿತ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ(The Kashmir Files Film) ದಲ್ಲಿ ಹಿರಿಯ ನಟ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಸೇರಿ ಅನೇಕ ದಿಗ್ಗಜ ನಟ-ನಟಿಯರು ನಟಿಸಿದ್ದಾರೆ. ಮಾರ್ಚ್ 11ರಂದು ತೆರೆಕಂಡಿದ್ದ ಈ ಸಿನಿಮಾ ಮೊದಲ ದಿನವೇ ಬರೋಬ್ಬರಿ 3.55 ಕೋಟಿ ರೂ. ಗಳಿಕೆ ಮಾಡಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.