ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ‌ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ ಚಿತ್ರಗಳು ಸಂಕ್ರಾಂತಿ ಸಮಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾಗಿಲ್ಲ. ಬಹಳ ವರ್ಷಗಳ ನಂತರ ಕನ್ನಡದ "ಛೂ ಮಂತರ್" ಚಿತ್ರವನ್ನು ಸಂಕ್ರಾಂತಿ ಸಮಯಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಬಿಡುಗಡೆ ಮಾಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:


ಟೀಸರ್ ಬಿಡುಗಡೆ ಹಾಗೂ ಚಿತ್ರದ ದಿನಾಂಕ ಘೋಷಣೆ ಮಾಡಲು ಆಯೋಜಿಸಲಾಗಿದ್ದ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್‌ ಎಂ ಸುರೇಶ್, ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಶುಭ ಕೋರಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.


 ಇಡೀ ಚಿತ್ರತಂಡದ ಪರಿಶ್ರಮದಿಂದ "ಛೂ ಮಂತರ್" ಉತ್ತಮವಾಗಿ ಬಂದಿದೆ. ಬಹು ನಿರೀಕ್ಷಿತ ಈ ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದರು.


ಇದೊಂದು ಡಾರ್ಕ್ ಹ್ಯೂಮರ್ ಜಾನರ್ ನ ಹಾರಾರ್ ಚಿತ್ರ. ಉತ್ತರ ಕಾಂಡ, ಶ್ರೀಲಂಕ, ಮೈಸೂರು, ಬೆಂಗಳೂರು ಮುಂತಾದ ಕಡೆ ಅರವತ್ತು ದಿನಗಳ ಚಿತ್ರೀಕರಣ ಮಾಡಿದ್ದೇವೆ. ಬೆಂಗಳೂರಿನಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಕಲಾಗಿದ್ದ ಅದ್ದೂರಿ ಸೆಟ್ ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ.  ರವಿವರ್ಮ ಸಾಹಸ ನಿರ್ದೇಶನ‌ ಮಾಡಿದ್ದಾರೆ. ಅನೂಪ್ ಅವರ ಛಾಯಾಗ್ರಹಣ ಹಾಗೂ ಶರಣ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಿರ್ದೇಶಕ ನವನೀತ್.


ತರುಣ್ ಸುಧೀರ್  ಈ ಚಿತ್ರಕ್ಕೆ ಓಂಕಾರ ಹಾಕಿದರು. ದರ್ಶನ್ ಅವರು ಶೀರ್ಷಿಕೆ ನೀಡಿದರು. ಅಲ್ಲಿಂದ ಚಿತ್ರದ ಜರ್ನಿ ಆರಂಭವಾಯಿತು. ನವನೀತ್ ಅವರ ನಿರ್ದೇಶನದ ಈ ಚಿತ್ರವನ್ನು ತರುಣ್ ಹಾಗೂ ಮಾನಸ ತರುಣ್ ಅವರು ಅದ್ದೂರಿಯಾಗಿ‌ ನಿರ್ಮಾಣ‌ ಮಾಡಿದ್ದಾರೆ.‌ ಸುಮಾರು ವರ್ಷಗಳಿಂದ ಸಾಮಾನ್ಯವಾಗಿ ಸಂಕ್ರಾಂತಿ ಸಮಯಕ್ಕೆ ಕನ್ನಡ ಚಿತ್ರಗಳನ್ನು ಬಿಡುಗಡೆ‌ ಮಾಡುತ್ತಿರಲಿಲ್ಲ. ಆದರೆ ತರುಣ್ ಅವರು ಸಂಕ್ರಾಂತಿ ಸಮಯಕ್ಕೆ ಚಿತ್ರ ಬಿಡುಗಡೆ‌ ಮಾಡುತ್ತಿದ್ದಾರೆ. ಉತ್ತಮ‌ ಕಥಾಹಂದರ ಹೊಂದಿರುವ ಈ ಚಿತ್ರ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ನನ್ನದು ಹಾಗೂ ಚಿತ್ರತಂಡದು. ಮುಂದೆ ಇದೇ ದಿನಾಂಕದಲ್ಲಿ ತಮ್ಮ ಚಿತ್ರವನ್ನು ಬಿಡುಗಡೆ ಮಾಡೋಣ ಎನ್ನುವಷ್ಟು ಈ ಚಿತ್ರ ಯಶಸ್ವಿಯಾಗಲಿ ಎಂದರು ನಾಯಕ ಶರಣ್.


 ನಾನು ನಾಯಕನಾಗಿ ನಟಿಸಿದ್ದ‌ ಹಾಗೂ ನನ್ನ ಮತ್ತು ಶರಣ್ ಅವರ ಕಾಂಬಿನೇಶನ್ ನಲ್ಲಿ ಮೂಡಿ ಬಂದಿದ್ದ "ಉಪಾಧ್ಯಕ್ಷ" ಕಳೆದ ಜನವರಿಯಲ್ಲಿ ಬಿಡುಗಡೆಯಾಗಿತ್ತು. ಈ ಜನವರಿಯಲ್ಲಿ ನಮ್ಮಿಬ್ಬರ ಕಾಂಬಿನೇಶ್ ನಲ್ಲಿ ಬಂದಿರುವ ಈ ಚಿತ್ರ ಬಿಡುಗಡೆಯಾಗುತ್ತಿದೆ. ಆದರೆ ಈ ಚಿತ್ರ ನಮ್ಮಿಬ್ಬರ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಎಂದು ನಟ ಚಿಕ್ಕಣ್ಣ ತಿಳಿಸಿದರು.  


ಇದನ್ನೂ ಓದಿ: ಕನ್ನಡದ ಕೋಟ್ಯಾಧಿಪತಿಗೆ ಡಾ. ಶಿವರಾಜ್‌ ಕುಮಾರ್‌ ಹೋಸ್ಟ್...!‌? ಅಪ್ಪು ಸ್ಥಾನಕ್ಕೆ ಮರುಜೀವ ತುಂಬಲು ಬರ್ತಿದ್ದಾರಾ ದೊಡ್ಮನೆ ಹಿರಿಮಗ?


ಶರಣ್ ಅವರ ಜೊತೆಗೆ ನಟಿಸಬೇಕೆಂಬ ಆಸೆ ಈ ಚಿತ್ರದ ಮೂಲಕ‌ ಈಡೇರಿದೆ ಎಂದು ನಟಿ ಮೇಘನಾ‌ ಗಾಂವ್ಕರ್ ತಿಳಿಸಿದರು. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ನಟಿ ಅದಿತಿ ಪ್ರಭುದೇವ ಹೇಳಿದರು. ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ದಿಲೀಪ್‌ ರಾಜ್, ಧರ್ಮ, ನರಸಿಂಹ ಜಾಲಹಳ್ಳಿ, ರಜನಿ ಭಾರದ್ವಾಜ್ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರಂಜನ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.