ಅ.19ರಂದು ಬಹು ನಿರೀಕ್ಷಿತ ‘ಘೋಸ್ಟ್’ ತೆರೆಗೆ; ವಿದೇಶದಲ್ಲೂ ‘ಬಿಗ್ ಡ್ಯಾಡಿ’ ಹವಾ ಜೋರು!

Release date of Ghost Movie: ಲಂಡನ್‍ನಿಂದ ಅಭಿಮಾನಿಗಳು ತಾವು "ಘೋಸ್ಟ್" ಚಿತ್ರದ ಬಿಡುಗಡೆಗೆ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡು, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Sep 3, 2023, 09:57 AM IST
  • ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟನೆಯ "ಘೋಸ್ಟ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
  • ಅಕ್ಟೋಬರ್ 19ರಂದು ಬಹು ನಿರೀಕ್ಷಿತ "ಘೋಸ್ಟ್" ಚಿತ್ರವು ಬಿಡುಗಡೆಯಾಗಲಿದೆ‌
  • "ಘೋಸ್ಟ್" ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವ ವಿದೇಶಿಗರು
ಅ.19ರಂದು ಬಹು ನಿರೀಕ್ಷಿತ ‘ಘೋಸ್ಟ್’ ತೆರೆಗೆ; ವಿದೇಶದಲ್ಲೂ ‘ಬಿಗ್ ಡ್ಯಾಡಿ’ ಹವಾ ಜೋರು! title=
"ಘೋಸ್ಟ್" ಬಿಡುಗಡೆ ದಿನಾಂಕ ಘೋಷಣೆ!

ಬೆಂಗಳೂರು: ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಘೋಸ್ಟ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ‌‌‌.

ಅಕ್ಟೋಬರ್ 19ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ‌. "ಘೋಸ್ಟ್" ಚಿತ್ರ ವಿದೇಶದಲ್ಲೂ ರಿಲೀಸ್ ಆಗಲಿದೆ. ಹ್ಯಾಟ್ರಿಕ್ ಹೀರೋ ಶಿವಣ್ಣ ಅವರ ಹುಟ್ಟುಹಬ್ಬಕ್ಕೆ ‘Big daddy’ ಟೀಸರ್ ಬಿಡುಗಡೆಯಾಗಿ, ಸಾಕಷ್ಟು ಜನಪ್ರಿಯವಾಗಿದೆ.

ಇದನ್ನೂ ಓದಿ: ಸುದೀಪ್‌ಗೆ ಚಕ್ರವರ್ತಿ ಚಂದ್ರಚೂಡ್‌ ಬರ್ತ್‌ ಡೇ ಗಿಫ್ಟ್‌

"ಘೋಸ್ಟ್" ಚಿತ್ರವನ್ನು ನೋಡಲು ಬರೀ ಭಾರತೀಯರಷ್ಟೇ ಅಲ್ಲ, ವಿದೇಶಿಗರು ಕಾತುರದಿಂದ ಕಾಯುತ್ತಿದ್ದಾರೆ. ಲಂಡನ್‍ನಿಂದ  ಅಭಿಮಾನಿಗಳು ತಾವು ಈ ಚಿತ್ರದ ಬಿಡುಗಡೆಗೆ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡು, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು "ಘೋಸ್ಟ್"  ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಹತ್ತನೇ ಸೀಸನ್ ನಲ್ಲಿ ಸರ್ಪ್ರೈಸ್ ಕೊಡಲು ಸಜ್ಜಾದ ಬಿಗ್ ಬಾಸ್ ರಿಯಾಲಿಟಿ ಶೋ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News