ಅಭಯ್ ಖುಷಿ ಮೂವೀಸ್ ಬ್ಯಾನರ್‌ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ "ಅಥಣಿ" ಚಿತ್ರದ "ಬಾರೆ ಬಾರೆ" ಎಂಬ ಹಾಡು ತುಮಕೂರಿನ ದಿಬ್ಬೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:ಆರಾಧ್ಯ ಬಚ್ಚನ್‌ ಮಾಡಿದ ʻಆʼ ಕೆಲಸಕ್ಕೆ ವಿಮಾನ ನಿಲ್ದಾಣದಲ್ಲೆ ಐಶ್ವರ್ಯ ರೈ ಕೆಂಡಾ ಮಂಡಲ! ನಂತರ ಆಗಿದ್ದೇನು ಗೊತ್ತಾ..?


ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹಾಗೂ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ರಾಜು ಚಿತ್ರಪುರ ಬರೆದಿರುವ ಈ ಹಾಡನ್ನು ಸ್ವಾತಿ ಶಂಕರ್ ಹಾಗೂ ಹರ್ಸಿವ್ ಭಘೀರ ಹಾಡಿದ್ದಾರೆ. ಹರ್ಷ ಕುಗೋಡು ಸಂಗೀತ ನೀಡಿದ್ದಾರೆ.  ಅಭಯ ಖುಷಿ ಮ್ಯೂಸಿಕ್ ಚಾನಲ್ ನಲ್ಲೇ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.                


ನಿರ್ದೇಶಕರಾಗಿ ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಸಮರ್ಥ ಅವರು ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಮಧು ಈ ಚಿತ್ರದ ನಾಯಕಿ. ನಾಗೇಂದ್ರ ಅರಸ್, ಶೋಭರಾಜ್, ಭವ್ಯ ಯತಿರಾಜ್, ಬಲರಾಜವಾಡಿ , ರಾಕೇಶ್ ಪೂಜಾರಿ, ಮೂರ್ತಿ, ವಿಷ್ಣುಪ್ರಿಯ, ಶ್ರೀನಿಧಿ, ಇಂದ್ರ ಕುಮಾರ್, ಸಿ ಜಿ ದಿಬ್ಬೂರು ಮುಂತಾದವರು ತಾರಾಗಣದಲ್ಲಿದ್ದಾರೆ.   


ರೈತಪರ ಕಾಳಜಿಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೈಂ..ಲವ್ ..ಸಸ್ಪೆನ್ಸ್.. ಮತ್ತು ಕಾಮಿಡಿ ಹೀಗೆ ಪ್ರೇಕ್ಷಕನಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಈ ಚಿತ್ರದಲ್ಲಿ ಹರ್ಷ ಕೂಗೋಡು ಸಂಗೀತ ನೀಡಿರುವ ಐದು ಹಾಡುಗಳಿದೆ‌. ಆ ಪೈಕಿ ಮೊದಲ ಹಾಡಾಗಿ "ಬಾರೆ ಬಾರೆ" ಐಟಂ ಸಾಂಗ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಾಡುಗಳು ಅನಾವರಣವಾಗಲಿದೆ. ಸಂದೀಪ್ ಹೊನ್ನಾಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಅವರ ಸಂಕಲನವಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌‌‌.  


ಇದನ್ನೂ ಓದಿ: Viral Video: ಗೆಳತಿಯನ್ನ ಮೆಚ್ಚಿಸಲು ಸಿಂಹದ ಬೋನಿಗೆ ನುಗ್ಗಿದ ಪ್ರೇಮಿ!!; ಆಮೇಲೆ ಏನಾಯ್ತು ನೋಡಿ


ತುಮಕೂರು, ಬೆಂಗಳೂರು, ರಾಮನಗರ ಹೊನ್ನಾವರ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.  ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಇದೆ. ಊರಿನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವ "ಅಥಣಿ" ಚಿತ್ರಕ್ಕೆ ಧರಣಿ ಮಂಡಲ ಮಧ್ಯದೊಳಗೆ ಎಂಬ ಅಡಿಬರಹವಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ