ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಗಳು ಅತ್ಯಂತ ಖಂಡನೀಯ.ಇದಕ್ಕೆ ಹೊಣೆಗಾರರಾಗಿರುವ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮ ಇಲ್ಲವೇ ಪಕ್ಷದವರೇ ಆಗಿರಲಿ ಪೊಲೀಸರು ಅವರನ್ನು ಬಂಧಿಸಿ ಅಲ್ಲಿನ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು.ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅವಕಾಶ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೋಮು ದ್ವೇಷವನ್ನು ಹುಟ್ಟುಹಾಕಿ, ಹರಡುವ ಮೂಲಕ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕೆಡಿಸುವ ಹುನ್ನಾರವನ್ನು ಸಮಾಜ ವಿರೋಧಿ ಶಕ್ತಿಗಳು ಸತತವಾಗಿ ನಡೆಸುತ್ತಾ ಬಂದಿರುವುದನ್ನು ಕಾಣಬಹುದು.ಇದು ಕೇವಲ ಆಕಸ್ಮಿಕವಾದ ಘಟನೆಗಳಾಗಿರದೆ ಇದರ ಹಿಂದೆ ಯೋಜಿತ ಕಾರ್ಯಸೂಚಿ ಇದ್ದ ಹಾಗೆ ಕಾಣುತ್ತಿದೆ.


ಇದನ್ನೂ ಓದಿ: ಶಿಕ್ಷಕರಿಗಾಗಿ ಖಾಸಗಿ ಶಾಲೆಗಳು ಪರದಾಟ! ಹೊರರಾಜ್ಯಗಳ‌ ಶಿಕ್ಷಕರ ಮೊರೆ ಹೋದ ಆಡಳಿತ ಮಂಡಳಿ?


ಆಡಳಿತಾರೂಢ ಪಕ್ಷದ ನಾಯಕರು ಪೊಲೀಸರ ಕಾರ್ಯನಿರ್ವಹಣೆಯಲ್ಲಿ ಮತ್ತೆ ಮತ್ತೆ ಮಧ್ಯಪ್ರವೇಶಿಸಿ, ತಮಗೆ ಅನುಕೂಲವಾಗುವಂತೆ ಕೆಲಸ ಮಾಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಇದರಿಂದ ಪೊಲೀಸರು ನೈತಿಕವಾಗಿ ಕುಸಿದುಹೋಗಿದ್ದಾರೆ.ಇದು ಅತ್ಯಂತ ಕಳವಳಕಾರಿ ಬೆಳವಣಿಗೆ.


ಸಂಪುಟ ತಿಂಗಳಾಂತ್ಯಕ್ಕೆ ವಿಸ್ತರಣೆ ಸಾಧ್ಯತೆ..?


ಅಪರಾಧಿಗಳು ಕೇವಲ ಅಪರಾಧಿಗಳು, ಅವರಿಗೆ ಜಾತಿ, ಧರ್ಮಗಳಿರುವುದಿಲ್ಲ. ಇದನ್ನು ಸರ್ಕಾರ, ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಮೊದಲು ತಿಳಿದುಕೊಳ್ಳಬೇಕು. ಯಾರದೋ ಪ್ರಚೋದನೆಯಿಂದ ವಿವೇಚನೆಯನ್ನು ಕಳೆದುಕೊಂಡು ಸಿಟ್ಟಿನ ಕೈಗೆ ವಿವೇಕವನ್ನು ಕೊಡಬಾರದು, ಇಂತಹ ಸಂದರ್ಭಗಳನ್ನು ಸಹನೆ, ಸಂಯಮಗಳ ಮೂಲಕ ಎದುರಿಸಬೇಕು.


ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ.ನಾವು ಸತ್ಯ, ನ್ಯಾಯ ಮತ್ತು ನೆಲದ ಕಾನೂನಿಗೆ ಬದ್ಧ.ಪೊಲೀಸರು ನೆಲದ ಕಾನೂನಿಗೆ ನಿಷ್ಠರಾಗಿ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲ ಇದೆ.ರಾಜಕೀಯ ಪೂರ್ವಗ್ರಹಪೀಡಿತರಾಗಿ ಕೈಗೊಳ್ಳುವ ನಿರ್ಧಾರಗಳಿಗಷ್ಟೇ ನಮ್ಮ ವಿರೋಧವಿದೆ ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.