ಕುತೂಹಲ ಮೂಡಿಸಿದೆ "ತತ್ಸಮ ತದ್ಭವ" ಚಿತ್ರದ ಟ್ರೇಲರ್..!

Tatsama Tadhbava Trailer : ಮೇಘನರಾಜ್ ಸರ್ಜಾ ಹಲವು ವರ್ಷಗಳ ನಂತರ ನಟಿಸಿರುವ "ತತ್ಸಮ ತದ್ಭವ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು.  

Written by - Savita M B | Last Updated : Aug 29, 2023, 10:45 AM IST
  • ಮೇಘನರಾಜ್ ಸರ್ಜಾ ನಟಿಸಿರುವ "ತತ್ಸಮ ತದ್ಭವ" ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.
  • ಸ್ನೇಹಕ್ಕೆ ಸಾತ್ ಕೊಡುವ ಧನಂಜಯ್, ಕುಟುಂಬದವರಿಗಾಗಿ ಬಂದು ನಿಂತ ಧ್ರುವ ಸರ್ಜಾ
  • ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಕುತೂಹಲ ಮೂಡಿಸಿದೆ "ತತ್ಸಮ ತದ್ಭವ" ಚಿತ್ರದ ಟ್ರೇಲರ್..! title=

Tatsama Tadhbava : ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು ಎಂದು ಮಾತು ಆರಂಭಿಸಿದ ಮೇಘನರಾಜ್ ಸರ್ಜಾ, ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. 

ಅವರಿಗೆ ಪ್ರಜ್ವಲ್ ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಅದಕ್ಕಾಗಿ ಅಭಿನಯಿಸಿದ್ದೇನೆ.

 ಪನ್ನಗಾಭರಣ, ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ಅಭಿನಯಿಸಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 15 ತೆರೆಗೆ ಬರಲಿದೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ವಿಶೇಷ ಧನ್ಯವಾದ ಎಂದರು.

ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್ ಗೆ ನಮ್ಮ ತಂದೆ ದೇವರಾಜ್ ಅವರು ಧ್ವನಿ ನೀಡಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು.

ಇದನ್ನೂ ಓದಿ-ಬಿಗ್ ಬಾಸ್ ನಿರೂಪಣೆಗೆ ಈ ಖ್ಯಾತ ನಟನ ಸಂಭಾವನೆ ಎಷ್ಟು ಕೋಟಿ ಗೊತ್ತಾ?

"ತತ್ಸಮ ತದ್ಭವ" ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್ ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ ಎನ್ನುತ್ತಾರೆ ನಿರ್ದೇಶಕ ವಿಶಾಲ್ ಆತ್ರೇಯ.

ನಾನು ಸಮಾನ್ಯವಾಗಿ ಭಾವುಕನಾಗುವುದಿಲ್ಲ. ಇಂದು ಏಕೋ ಗೊತ್ತಿಲ್ಲ ಸ್ವಲ್ಪ ಭಾವುಕನಾಗುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪನ್ನಗಾಭರಣ, ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. 

ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೆಪ್ಟೆಂಬರ್ 15 ಚಿತ್ರ ಬಿಡುಗಡೆಯಾಗಲಿದೆ.  ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ಧನ್ಯವಾದ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಇನ್ನೊಂದು ವಿಶೇಷವೆಂದರೆ ನಮ್ಮ ಚಿತ್ರದ ಟಿಕೇಟ್ ಪಡೆದುಕೊಂಡವರು ಕೊನೆಯಲ್ಲಿ ಆ ಟಿಕೇಟ್ ನಲ್ಲಿರುವ ಕ್ಯೂ ಆರ್ ಕೋಡನ್ನು ಸ್ಕ್ಯಾನ್ ಮಾಡಬೇಕು. ಆಗ ಹಲವರಿಗೆ ಗಿಫ್ಟ್ ಕೂಪನ್ ಗಳು ದೊರೆಯಲಿದೆ ಎಂದರು. 

ಸಂಗೀತ ನಿರ್ದೇಶಕ ವಾಸುಕಿ ವೈಭವ್, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ಕೆ.ಆರ್.ಜಿ ಸ್ಟುಡಿಯೋಸ್ ಯೋಗಿ ಜಿ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ-ಯಶ್‌ ರನ್ನು ಭಾವ ಎನ್ನುವ ಶ್ರೀಲೀಲಾ.. ಈ ಸಂಬಂಧದ ಹಿಂದಿದೆ ಇಂಟರೆಸ್ಟಿಂಗ್ ಸ್ಟೋರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News