ಬೆಂಗಳೂರು: ಬಹಳವರ್ಷಗಳ ನಂತರ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ "ಉಂಡೆನಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ನವರಸ ನಾಯಕ ಜಗ್ಗೇಶ್ ಟ್ರೇಲರ್ ಬಿಡುಗಡೆ ಮಾಡಿದರು.
ಟ್ರೇಲರ್ ಕುರಿತು ಮಾತಾನಾಡಿರುವ ಜಗ್ಗೇಶ್, ನನ್ನ ತಮ್ಮ ಕೋಮಲ್ ಬಹಳವರ್ಷಗಳ ನಂತರ ನಟಿಸಿರುವ ಚಿತ್ರವಿದು. "ಕೋಮಲ್ ಕಾಮಿಡಿ ಪಾತ್ರಗಳನ್ನು ನೋಡಿದಾಗ, ಎಷ್ಟೋ ಸಲ ನಾನು ಅಂದುಕೊಂಡಿದ್ದೀನಿ ಇವನ ಹಾಗೆ ನಾನು ಕಾಮಿಡಿ ಕಲಿಯಬೇಕು" ಅಂತ ಅಷ್ಟು ಉತ್ತಮ ಕಲಾವಿದ ಕೋಮಲ್ ಎಂದು ತಮ್ಮನ್ನು ಹಾಡಿ ಹೊಗಳಿದರು. ನಿರ್ದೇಶಕರು ಲಾಕ್ ಡೌನ್ ಸನ್ನಿವೇಶವನ್ನಿಟ್ಟುಕೊಂಡು ಹಾಸ್ಯ ಚಿತ್ರ ಮಾಡಿದ್ದಾರೆ. ನಿರ್ಮಾಪಕರು ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ ಚಿತ್ರ ಯಶಸ್ವಿಯಾಗಲಿ ಎಂದು ಜಗ್ಗೇಶ್ ಹಾರೈಸಿದರು.
ಇದನ್ನೂ ಓದಿ: KKR vs RCB : ಮೈದಾನದಲ್ಲಿ ಶಾರುಖ್ ಖಾನ್ - ವಿರಾಟ್ ಕೊಹ್ಲಿ ಡ್ಯಾನ್ಸ್.. ಎಲ್ಲೆಲ್ಲೂ ಇವರದ್ದೇ ಹವಾ!
ಚಿತ್ರ ಕುರಿತು ನಾಯಕ ಕೋಮಲ್, ಬಹಳ ದಿನಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕ ರಾಜಶೇಖರ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಜೊತೆ ನಟಿಸಿರುವ ತಬಲನಾಣಿ, ಹರೀಶ್ ರಾಜ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಮಾಡಿದ್ದಾರೆ. ಏಪ್ರಿಲ್ 14 ಚಿತ್ರ ತೆರೆಗೆ ಬರಲಿದೆ.
ಈ ಸಂದರ್ಭದಲ್ಲಿ ಮಾತಾನಾಡಿದ ನಿರ್ದೇಶಕ ಕೆ.ಎಲ್ ರಾಜಶೇಖರ್, ಮೊದಲ ಲಾಕ್ ಡೌನ್ ನಲ್ಲಿ ಕಥೆ ಬರೆದೆ. ಆನಂತರ ನಿರ್ಮಾಪಕ ನಂದಕಿಶೋರ್ ಅವರ ಬಳಿ ಕಥೆ ಹೇಳಿದಾಗ, ಅವರು ಈ ಚಿತ್ರವನ್ನು ಕೋಮಲ್ ಅವರು ಮಾಡಬೇಕು ಎಂದರು.
ಇದನ್ನೂ ಓದಿ: Raveena Tandon: ಕೆ.ಜಿ.ಎಫ್ ಸಿನಿಮಾದ ಪ್ರಧಾನ ಮಂತ್ರಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ
ಕೋಮಲ್ ಅವರಿಗಾಗಿಯೇ ಈ ಕಥೆ ಮಾಡಿದೆ. ಆದರೆ ಅವರು ನಟಿಸಲು ಒಪ್ಪುತ್ತಾರೊ? ಇಲ್ಲವೊ? ಎಂಬ ಆತಂಕವಿತ್ತು. ಕಥೆ ಕೇಳಿದ ಕೋಮಲ್ ಅವರು, ಈ ಕಥೆ ಚೆನ್ನಾಗಿದೆ. ನಾನಲ್ಲ. ಯಾರು ಮಾಡಿದರೂ ಈ ಚಿತ್ರ ಯಶಸ್ವಿಯಾಗುತ್ತದೆ ಎಂದಿದ್ದರು. ಹಾಗೂ ಚಿತ್ರದಲ್ಲಿ ಹರೀಶ್ ರಾಜ್, ತಬಲನಾಣಿ, ಅಪೂರ್ವ ಹಾಗೂ ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ನಟಿಸಿದ್ದಾರೆ. ಇದೇ ಏಪ್ರಿಲ್ 14ರಂದು ಚಿತ್ರ ತೆರೆ ಮೇಲೆ ಬರಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.