ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ಬಾಲಿವುಡ್ ನ ಖ್ಯಾತ ನಿರ್ದೇಶಕ..!

ತೆಲುಗಿನ ಡಕಾಯಿತ್ ಚಿತ್ರದಲ್ಲಿ ಕಪಟ ಪೊಲೀಸ್ ಆಫೀಸರ್ ನಟಿಸಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ

Written by - Manjunath Naragund | Last Updated : Mar 8, 2025, 05:50 PM IST
  • 8 ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು.
  • ಈ ವೇಳೆ ನಿರ್ದೇಶಕ ಕಂ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ.
  • ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ.
ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ಬಾಲಿವುಡ್ ನ ಖ್ಯಾತ ನಿರ್ದೇಶಕ..!

ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್.

Add Zee News as a Preferred Source

ಅನುರಾಗ್ ಕಶ್ಯಪ್ ದಕ್ಷಿಣದ ಕಡೆಗೆ ಬಂದಾಗಿದೆ. ತಮಿಳಿನ ಮಹಾರಾಜ ಚಿತ್ರದಲ್ಲಿ ಅದ್ಭುತ ಪಾತ್ರದಲ್ಲಿ ಗಮನಸೆಳೆದಿದ್ದಾರೆ.ಈ ಮೂಲಕ ತಮಿಳು ಪ್ರೇಕ್ಷಕರನ್ನ ರಂಜಿಸಿದ್ದಾರೆ. ತೆಲುಗಿನ ಡಕಾಯಿತ್ ಚಿತ್ರದಲ್ಲಿ ಕಪಟ ಪೊಲೀಸ್ ಆಫೀಸರ್ ನಟಿಸಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಸ್ಯ ನಟ-ನಿರ್ದೇಶಕ ಸುಜಯ್ ಶಾಸ್ತ್ರಿ ಈ ಚಿತ್ರವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಮೂಲಕ ಒಂದು ಒಳ್ಳೆ ಕಥೆಯನ್ನ ಹೇಳುತ್ತಿದ್ದಾರೆ.

ಇದನ್ನೂ ಓದಿ: ಬಿರುಕು ಬಿಟ್ಟ ಹಿಮ್ಮಡಿಗಳನ್ನು ನಿವಾರಿಸಲು, ಈ 4 ಮನೆಮದ್ದುಗಳನ್ನು ಬಳಸಿ..!

8 ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ವೇಳೆ ನಿರ್ದೇಶಕ ಕಂ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ. ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಚಿತ್ರ ಕೂಡ ಅದನ್ನೇ ಹೇಳುತ್ತದೆ. ಅರವಿಂದ್ ಹಾಗೂ ಸುಜಯ್ ಶಾಸ್ತ್ರೀಗೆ ಧನ್ಯವಾದ ಎಂದರು.

ಇದನ್ನೂ ಓದಿ: ಈ ಡಿಟಾಕ್ಸ್ ನೀರು ಕುಡಿದ್ರೆ ಯೂರಿಕ್ ಆಮ್ಲದ ಸಣ್ಣ ಹರಳುಗಳು ಶೋಧಿಸಲ್ಪಡುತ್ತವೆ; ತಕ್ಷಣವೇ ನಿಯಂತ್ರಣಕ್ಕೆ ಬರುತ್ತೆ!!

ಕನ್ನಡದ '8' ಎಂಬ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ. ಹಾಸ್ಯನಟ ಸುಜಯ್ ಶಾಸ್ತ್ರೀ ಈ ಚಿತ್ರದ ಸಾರಥಿ. ಎವಿಆರ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.ಫುಟ್‌ಬಾಲ್ ಆಟದ ಸುತ್ತ ನಡೆಯುವ ಕಥೆ '8' ಚಿತ್ರದಲ್ಲಿದೆ.

AVR ಪ್ರೊಡಕ್ಷನ್ ಚೊಚ್ಚಲ ಸಿನಿಮಾ‌ 8

ಕನ್ನಡ ಚಿತ್ರರಂಗಕ್ಕೆ ಸದಾ ಅಭಿರುಚಿ ಸಿನಿಮಾಗಳನ್ನು ನೀಡುವ ಉದ್ದೇಶದಿಂದ ಶುರುವಾಗಿರುವ ಎವಿಆರ್ ಚೊಚ್ಚಲ ಕಾಣಿಕೆ 8. ಅರವಿಂದ್ ರೆಡ್ಡಿ ನಿರ್ಮಾಣದಲ್ಲಿ  ಈ ಸಿನಿಮಾ‌ ಮೂಡಿ ಬರಲಿದೆ. ಈ ಚಿತ್ರದ ಜೊತೆಗೆ ಸಿಂಪಲ್ ಸುನಿ ಜೊತೆಗೂ ಎವಿಆರ್ ಕೈ ಜೋಡಿಸಿದೆ. ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕನಾಗಿ ನಟಿಸಲಿರುವ ಈ ಸಿನಿಮಾ ಈಗಾಗಲೇ ಘೋಷಣೆಯಾಗಿದೆ. ಸದ್ಯ 8 ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

About the Author

Trending News