ಯಶ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಥ್ರಿಲ್ಲಿಂಗ್ ಸರ್ಪ್ರೈಸ್! ಏನಿರಬಹುದು ಗೆಸ್ ಮಾಡಿ..
Rocking Star Yash: ಕೆಜಿಎಫ್ 2 ನಂತರ ರಾಕಿಂಗ್ ಸ್ಟಾರ್ ಯಶ್ ಸಾಕಷ್ಟು ಗ್ಯಾಪ್ ತೆಗೆದುಕೊಂಡಿದ್ದರು.. ಆದರೆ ಕೊನೆಗೂ ‘ಟಾಕ್ಸಿಕ್’ ಸಿನಿಮಾ ಶುರು ಮಾಡಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು.. ಸದ್ಯ ಈ ಪ್ಯಾನ್ ಇಂಡಿಯಾ ಸಿನಿಮಾದ ಶೂಟಿಂಗ್ ಶರವೇಗದಲ್ಲಿ ಸಾಗುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಮುಂಬೈಗೆ ಶಿಫ್ಟ್ ಆಗಿದೆಯಂತೆ.
Toxic Movie Update: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಸಮೀಪಿಸುತ್ತಿದೆ. ಜನವರಿ 8 ರಂದು ಸ್ಟಾರ್ ಹೀರೋ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಅದೇ ದಿನ 'ಟಾಕ್ಸಿಕ್' ಸಿನಿಮಾದಿಂದ ಒಂದಷ್ಟು ಅಪ್ಡೇಟ್ ಹೊರಬೀಳಬಹುದು ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದರು... ಆದರೆ ಈಗ ಅದು ನಿಜವಾಗಿದೆ. ಈ ಬಗ್ಗೆ ಚಿತ್ರ ನಿರ್ಮಾಣ ಸಂಸ್ಥೆ 'ಕೆವಿಎನ್ ಪ್ರೊಡಕ್ಷನ್ಸ್' ಅಪ್‌ಡೇಟ್ ನೀಡಿದೆ. ಇದನ್ನು ಕೇಳಿ ಅಭಿಮಾನಿಗಳು ಕೂಡ ಥ್ರಿಲ್ ಆಗಿದ್ದಾರೆ.
ಸದ್ಯ ಈ ಚಿತ್ರದ ಪೋಸ್ಟರ್ ಎಲ್ಲರನ್ನೂ ಸೆಳೆಯುತ್ತಿದೆ. ರಾಕಿಂಗ್ ಸ್ಟಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಜನವರಿ 8 ರಂದು ಬೆಳಿಗ್ಗೆ 10.25 ಕ್ಕೆ ಚಿತ್ರದ ಗ್ಲಿಂಪ್ಸಸ್ ಅನ್ನು ಬಿಡುಗಡೆ ಮಾಡಲು 'ಟಾಕ್ಸಿಕ್' ಚಿತ್ರತಂಡ ಯೋಜಿಸುತ್ತಿದೆ. ಅಂದು ಬಿಗ್ ಅಪ್ಡೇಟ್ ಬರುವುದು ಖಚಿತ ಎಂದು ಟಾಕ್ಸಿಕ್ ಟೀಮ್ ಹೇಳಿದೆ. ಇದು ಯಶ್ ಅಭಿಮಾನಿಗಳ ಸಂತಸವನ್ನು ಹೆಚ್ಚಿಸಿದೆ.
ಫಿನಾಲೆ ಹತ್ತಿರವಾಗುತ್ತಿದ್ದಂತೆ ಬಿಗ್ ಟ್ವಿಸ್ಟ್ ನೀಡಿದ ಬಿಗ್‌ಬಾಸ್! ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ..
ಇತ್ತೀಚೆಗಷ್ಟೇ ಬಿಡುಗಡೆಯಾದ ಪೋಸ್ಟರ್‌ನಲ್ಲಿ ಯಶ್ ಹಳೆಯ ಕಾರಿನ ಪಕ್ಕದಲ್ಲಿ ನಿಂತು, ಬಾಯಲ್ಲಿ ಸಿಗರೇಟ್.. ತಲೆಗೆ ಟೋಪಿ ಹಾಕಿಕೊಂಡು ತುಂಬಾ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.. ಮೊನ್ನೆಯಷ್ಟೇ ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ತಲೆಗೆ ಟೋಪಿ ಹಾಕಿಕೊಂಡು ಕಾಣಿಸಿಕೊಂಡಿದ್ದರು.
ಇನ್ನು ಕೆವಿಎನ್ ಪ್ರೊಡಕ್ಷನ್ಸ್ ಅದ್ಧೂರಿ ಬಜೆಟ್ ನಲ್ಲಿ 'ಟಾಕ್ಸಿಕ್' ಚಿತ್ರವನ್ನು ನಿರ್ಮಿಸುತ್ತಿದೆ. ಹಾಲಿವುಡ್ ತಂತ್ರಜ್ಞರು ಕೂಡ ಈ ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಪ್ಯಾನ್ ವರ್ಲ್ಡ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಹಾಲಿವುಡ್ ಸ್ಟುಡಿಯೋಗಳೊಂದಿಗೆ ಚರ್ಚೆಯೂ ನಡೆಯುತ್ತಿದೆ. ಮಲಯಾಳಂ ಚಿತ್ರರಂಗದ ಗೀತು ಮೋಹನದಾಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮತ್ತು ಕಿಯಾರಾ ಅಡ್ವಾಣಿ ಮತ್ತು ನಯನತಾರಾ ನಾಯಕಿಯರಾಗಿ ನಟಿಸುತ್ತಿದ್ದಾರೆ. ಅಲ್ಲದೇ ಮುಂಬೈನಲ್ಲಿ ನೆಲೆಸಿರುವ ಖ್ಯಾತ ಬ್ರಿಟಿಷ್ ನಟ ಬೆನೆಡಿಕ್ಟ್ ಗ್ಯಾರೆಟ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆಯಂತೆ. ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಫಾಲೋವರ್ಸ್ ಜೊತೆಗೆ ಮಾತನಾಡುವಾಗ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ-ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಕಿಚ್ಚ ಸುದೀಪ್! ನಟನ ಹಾಲಿನಂತ ಮನಸ್ಸಿಗೆ ಅಭಿಮಾನಿಗಳ ಮೆಚ್ಚುಗೆ!!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್