ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್....ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ `ಖುಷಿ` ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.
ಮುಂಬೈ: ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.
ಇದನ್ನೂ ಓದಿ: ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆ ಕೈಯಲ್ಲಿ ಇರಲಿದೆ: ಕಾಲಜ್ಞಾನಿ
ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು.
ಇದನ್ನೂ ಓದಿ: Uniform Civil Code ಕುರಿತು ಕೇಂದ್ರ ಕಾನೂನು ಸಚಿವರ ಹೇಳಿಕೆ ಪ್ರಕಟ, ಹೇಳಿದ್ದೇನು ಗೊತ್ತಾ?
ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲಾ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.