ಬೆಂಗಳೂರು: ಏ.1ರಂದು ಬಿಡುಗಡೆಯಾಗಬೇಕಿದ್ದ ತ್ರಿಕೋನ ಚಿತ್ರವು ಈಗ ಏ.8ಕ್ಕೆ ಮುಂದೂಡಲ್ಪಟ್ಟಿದೆ.ಈ ಸಂಬಂಧ ನಿರ್ಮಾಪಕ ರಾಜಶೇಖರ್​, ರಾಯಭಾರಿ ಸುಚೇಂದ್ರ ಪ್ರಸಾದ್​ ಮತ್ತು ನಿರ್ದೇಶಕ ಚಂದ್ರಕಾಂತ್​ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯವನ್ನು ಹಂಚಿಕೊಂಡರು.


COMMERCIAL BREAK
SCROLL TO CONTINUE READING

ಪುನೀತ್​ ರಾಜಕುಮಾರ್​ ಅಭಿನಯದ "ಜೇಮ್ಸ್​" ಚಿತ್ರವು ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ವಿತರಕರ ಜತೆಗೆ ಮಾತನಾಡುವಾಗ, "ಜೇಮ್ಸ್​' ಚಿತ್ರವು ಎಲ್ಲೆಲ್ಲಿ ಪ್ರದರ್ಶನವಾಗುತ್ತಿದೆ, ಆ ಕೆಲವು  ಚಿತ್ರಮಂದಿರಗಳನ್ನು ಕೊಡಿಸುವುದಾಗಿ ಹೇಳಿದರು.  ನಾನು ಪುನೀತ್​ ಅಭಿಮಾನಿಯಾಗಿ, ಅವರ ಚಿತ್ರ ಓಡುತ್ತಿರುವ ಚಿತ್ರಮಂದಿರಗಳಲ್ಲಿ  ನಮ್ಮ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಮನಸ್ಸು ಒಪ್ಪುತ್ತಲ್ಲ.ಇದು ಮೊದಲ ಕಾರಣ. ನಾವು ಏಪ್ರಿಲ್​ 01ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದಾಗ ಒಂದು ಚಿತ್ರ ಸಹ ಘೋಷಣೆಯಾಗಿರಲಿಲ್ಲ. ಒಂದು ಅಥವಾ ಎರಡು ಸಿನಿಮಾಗಳು ಬಿಡುಗಡೆ ಆಗಬಹುದು ಎಂದು ಊಹಿಸಿದ್ದೆವು. ಅದರಂತೆ ಪ್ರಚಾರ ಶುರು ಮಾಡಿದ್ದೆವು. ಆದರೆ, ಒಂದೊಂದೇ ಸಿನಿಮಾಗಳು ಘೋಷಣೆಯಾದವು. ಆರರಿಂದ ಏಳು ಸಿನಿಮಾಗಳು ಅಂದು ಬಿಡುಗಡೆಯಾಗುವ ಘೋಷಣೆಯಾಗಿವೆ. ನಾವು ಕನ್ನಡ ಸಿನಿಮಾದವರೇ ಚಿತ್ರಮಂದಿರಗಳಿಗಾಗಿ ಪರಸ್ಪರ ಕಿತ್ತಾಡುವ ಪರಿಸ್ಥಿತಿ ಇದೆ. ನಾವು ಮುಂಚೆಯೇ ಘೋಷಣೆ ಮಾಡಿದ್ದೇವೆ, ನೀವು ತಡವಾಗಿ ಬಿಡುಗಡೆ ಮಾಡಿ ಎಂದು ಹೇಳುವುದು ಎಷ್ಟು ಸೂಕ್ತ? ಎಂದು ಪ್ರಶ್ನೆ ಹಾಕಿಕೊಂಡಾಗ, ನಾವೇ ಮುಂದಕ್ಕೆ ಹೋಗುವ ಎಂದು ಚರ್ಚಿಸಿ, ಏಪ್ರಿಲ್​ 08ಕ್ಕೆ ಬಿಡುಗಡೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೇವೆ. ಮೂರನೇ ಕಾರಣ ಎಂದರೆ, ಈ ಚಿತ್ರದ ಮೂಲಕ ನಾವು ತಾಳ್ಮೆಯ ಬಗ್ಗೆ ಹೇಳುವುದಕ್ಕೆ ಹೊರಟಿದ್ದೇವೆ. ಈಗಾಗಲೇ ಟೀಸರ್​ ಮತ್ತು ಟ್ರೇಲರ್​ನಲ್ಲಿ ಅಹಂ, ಶಕ್ತಿ ಮತ್ತು ತಾಳ್ಮೆಯ ನಡುವೆ ಯಾರಿಗೆ ಜಯ ಸಿಗುತ್ತದೆ ಎಂದು ಹೇಳುವುದಕ್ಕೆ ಹೊರಟಿದ್ದೇವೆ. ನಾವು ಪ್ರಚಾರ ಮಾಡಿದ್ದೀವಿ, ಇನ್ನೂ ಮಾಡುತ್ತೇವೆ ಎನ್ನುವ ಶಕ್ತಿ ಪ್ರದರ್ಶನವಾಗಲೀ ಅಥವಾ ಚಿತ್ರ ಚೆನ್ನಾಗಿ ಬಂದಿದ್ದು ನೋಡಿದವರು ಒಪ್ಪಿಕೊಳ್ಳುತ್ತಾರೆ ಎಂಬ ಅಹಂಕಾರವಾಗಲೀ ಇಲ್ಲ. ನಾವು ತಾಳ್ಮೆಯಿಂದ ಒಂದು ವಾರ ಮುಂದಕ್ಕೆ ಹೋದರೂ ಪರವಾಗಿಲ್ಲ ಎಂದು ಏಪ್ರಿಲ್ 8 ರಂದು ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ಮಾಪಕ ಹಾಗೂ ಕಥೆಗಾರ ರಾಜಶೇಖರ್ ತಿಳಿಸಿದರು.


ಇದನ್ನೂ ಓದಿ: 'ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ಬೇಡ'-ಸಿದ್ದರಾಮಯ್ಯ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.