ಗಂಡು ಮಗುವಿಗೆ ಜನ್ಮ ನೀಡಿದ ನಟಿ ಹಾಗೂ ಸಂಸದೆ ನುಸ್ರತ್ ಜಹಾನ್
ತೃಣಮೂಲ ಕಾಂಗ್ರೆಸ್ ಸಂಸದೆ ಮತ್ತು ನಟಿ ನುಸ್ರತ್ ಜಹಾನ್ ಗುರುವಾರ ಮಧ್ಯಾಹ್ನ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮತ್ತು ನಟಿ ನುಸ್ರತ್ ಜಹಾನ್ ಗುರುವಾರ ಮಧ್ಯಾಹ್ನ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಸಂಜೆ ಪಾರ್ಕ್ ಸ್ಟ್ರೀಟ್ನಲ್ಲಿರುವ ಆಸ್ಪತ್ರೆಗೆ ದಾಖಲಾದ ಶ್ರೀಮತಿ ಜಹಾನ್ (Nusrat Jahan) ಮಧ್ಯಾಹ್ನ 12.20 ರ ಸುಮಾರಿಗೆ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಹನಿಮೂನ್ ಮೂಡ್ ನಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ...!
ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ವೈದ್ಯರ ಕಣ್ಗಾವಲಿನಲ್ಲಿ ಇದ್ದಾರೆ.ಇದೇ ವೇಳೆ ಶ್ರೀಮತಿ ಜಹಾನ್ ನ ನಟ-ಸ್ನೇಹಿತ ಯಶ್ ದಾಸ್ ಗುಪ್ತಾ ಕೂಡ ಆಸ್ಪತ್ರೆಯಲ್ಲಿದ್ದರು ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: 'ನೀವು ನಮ್ಮನ್ನು ತಳ್ಳಬೇಡಿ, ಅರ್ಥ ಮಾಡಿಕೊಳ್ಳಿ ಸರ್'-ಮಾಧ್ಯಮದವರಲ್ಲಿ ಟಿಎಂಸಿ ಸಂಸದೆ ವಿನಂತಿ
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಶ್ರೀಮತಿ ಜಹಾನ್ ಅವರಿಂದ ಬೇರ್ಪಟ್ಟ ಪತಿ ನಿಖಿಲ್ ಜೈನ್ , "ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರಬಹುದು, ಆದರೆ ನಾನು ನವಜಾತ ಶಿಶು ಮತ್ತು ಆತನ ತಾಯಿಗೆ ಶುಭ ಹಾರೈಸುತ್ತೇನೆ. ಗಂಡು ಮಗುವಿಗೆ ಉಜ್ವಲ ಭವಿಷ್ಯವಿದೆ ಎಂದು ನಾನು ಬಯಸುತ್ತೇನೆ." ಎಂದು ಶುಭಕೋರಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ