Actress Pavitra Jayaram Passed Away: ಕಿರುತೆರೆ ನಟಿ ಪವಿತ್ರಾ ಜಯರಾಮ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಮಹೆಬೂಬ್‌ನಗರ ಜಿಲ್ಲೆಯ ಭೂತ್‌ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ (ಬಿ) ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪವಿತ್ರ ಜಯರಾಮ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Mother's Day: ಮೊದಲ ಬಾರಿ ತಾಯಿಯಾಗುತ್ತಿದ್ದರೆ ತಪ್ಪದೇ ಈ ಆರೋಗ್ಯ ಸಲಹೆ ಪಾಲಿಸಿರಿ


ಇಂದು ಮುಂಜಾನೆ ಕರ್ನಾಟಕದಲ್ಲಿರುವ ತನ್ನ ಸ್ವಂತ ಗ್ರಾಮದಿಂದ ಹೈದರಾಬಾದ್‌’ಗೆ ಹಿಂತಿರುಗುತ್ತಿದ್ದಾಗ, ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್‌’ಗೆ ಡಿಕ್ಕಿ ಹೊಡೆದು, ಅಲ್ಲಿಂದ ಹೈದರಾಬಾದ್‌’ನಿಂದ ವನಪರ್ತಿಗೆ ಬರುತ್ತಿದ್ದ RTC ಬಸ್‌’ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪವಿತ್ರ ಜಯರಾಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಸಹ ನಟರು ಮತ್ತು ಕುಟುಂಬ ಸದಸ್ಯರು ಆಕೆಯೊಂದಿಗೆ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.


ಈ ಘಟನೆಯಲ್ಲಿ ಆಕೆಯ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್ ಮತ್ತು ಸಹ ನಟ ಚಂದ್ರಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.


ಕನ್ನಡದಲ್ಲಿ ಹಲವು ಧಾರಾವಾಹಿಗಳನ್ನು ಮಾಡಿರುವ ಪವಿತ್ರ ಜಯರಾಮ್ ತೆಲುಗಿನಲ್ಲಿ ತ್ರಿನಯನಿ ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದರು. ಈ ಧಾರಾವಾಹಿಯಲ್ಲಿ ವಿಲನ್ ಆಗಿ ನಟಿಸಿ ತೆಲುಗು ಭಾಷೆಯಲ್ಲಿ ಫೇಮಸ್ ಆಗಿದ್ದರು. ಕನ್ನಡ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ ಪವಿತ್ರಾ ಮಂಡ್ಯ ತಾಲೂಕಿನ ಹನಕೆರೆಯವರು.


ಇದನ್ನೂ ಓದಿ: Adhipatra: ಬಿಗ್‌ ಬಾಸ್‌ ರೂಪೇಶ್‌ ಶೆಟ್ಟಿಯ ಅಧಿಪತ್ರದಲ್ಲಿ ಕರಾವಳಿಯ ದೈವ ದರ್ಶನ!


ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇದುವರೆಗೆ ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ತಿಲೋತ್ತಮಾ ಪಾತ್ರದಲ್ಲಿ ನಟಿಸುತ್ತಿದ್ದರು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.