ರಕ್ಷಿತ್‌ ಶೆಟ್ಟಿಯ ಚಾರ್ಲಿಗೆ UFO ಬಲ: ಹಿಂದಿಯಲ್ಲಿ ವಿತರಣೆ ಮಾಡಲಿದೆ ಈ ಸಂಸ್ಥೆ..!

ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆಗೆ ಬರುತ್ತಿರುವ ಈ ಚಿತ್ರ ಈಗಾಗಲೇ ಬೇರೆ ಬೇರೆ ಭಾಷೆಗಳ ವೀಕ್ಷಕರನ್ನು ಟೀಸರ್‌ ಮೂಲಕ ಸೆಳೆದಿದೆ. ಅದರಂತೆ ಅಲ್ಲಿನ ಸ್ಟಾರ್‌ ನಟರೂ ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. 

Written by - YASHODHA POOJARI | Edited by - Bhavishya Shetty | Last Updated : May 10, 2022, 05:32 PM IST
  • ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ
  • ಚಿತ್ರವನ್ನು ಖ್ಯಾತ ಸಂಸ್ಥೆ ಯುಎಫ್‌ಒ ವಿತರಣೆ ಮಾಡಲಿದೆ
  • ಶ್ವಾನದ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾ
ರಕ್ಷಿತ್‌ ಶೆಟ್ಟಿಯ ಚಾರ್ಲಿಗೆ UFO ಬಲ: ಹಿಂದಿಯಲ್ಲಿ ವಿತರಣೆ ಮಾಡಲಿದೆ ಈ ಸಂಸ್ಥೆ..! title=
777 Charlie

ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಇನ್ನೇನು ಜೂನ್‌ 10ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಅದಕ್ಕೂ ಮುನ್ನ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿರುವ ತಂಡ, ನಿತ್ಯ ಒಂದಲ್ಲ ಒಂದು ಅಪ್‌ಡೇಟ್‌ ಹಂಚಿಕೊಳ್ಳುತ್ತಿದೆ. ಇದೀಗ ಹಿಂದಿಯಲ್ಲಿ ಈ ಚಿತ್ರವನ್ನು ವಿತರಣೆ ಮಾಡುವವರು ಯಾರು ಎಂಬ ವಿಚಾರವನ್ನು ಹೊರಹಾಕಿದೆ. 

ಇದನ್ನು ಓದಿ: ಪ್ರಿಯಾಂಕ್ ಖರ್ಗೆ ಪೊಲೀಸ್ ನೋಟಿಸ್‌ಗೆ ಬೆಚ್ಚಿ ಬೀಳುವುದೇಕೆ?: ಬಿಜೆಪಿ

ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆಗ ಬರುತ್ತಿರುವ ಈ ಚಿತ್ರ ಈಗಾಗಲೇ ಬೇರೆ ಬೇರೆ ಭಾಷೆಗಳ ವೀಕ್ಷಕರನ್ನು ಟೀಸರ್‌ ಮೂಲಕ ಸೆಳೆದಿದೆ. ಅದರಂತೆ ಅಲ್ಲಿನ ಸ್ಟಾರ್‌ ನಟರೂ ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. 

ತೆಲುಗಿನಲ್ಲಿ ನಟ ರಾಣಾ ದಗ್ಗುಬಾಟಿ, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು, ಮಲಯಾಳಂನಲ್ಲಿ ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ವಿತರಣೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ. ಅದೇ ರೀತಿ ಹಿಂದಿಯಲ್ಲಿ ಖ್ಯಾತ ಸಂಸ್ಥೆ ಯುಎಫ್‌ಒ (UFO) ವಿತರಣೆ ಮಾಡಲಿದೆ. 

ಶ್ವಾನದ ಹಿನ್ನೆಲೆಯಲ್ಲಿಯೇ ಸಾಗುವ ಈ ಸಿನಿಮಾದಲ್ಲಿ ನಾಯಕನಾಗಿ ರಕ್ಷಿತ್‌ ಶೆಟ್ಟಿ ನಟಿಸಿದರೆ, ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿದಂತೆ ಹಲವರಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರ ನಿರ್ದೇಶಿಸಿದರೆ, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದಾರೆ. 

ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಅವರ ಸಾಹಸ ಈ ಚಿತ್ರಕ್ಕಿದೆ. 

ಇದನ್ನು ಓದಿ: ವೈಶಾಖ ಪೂರ್ಣಿಮೆಯ ದಿನದಂದು ಗೋಚರಿಸಲಿದೆ ಚಂದ್ರಗ್ರಹಣ, ಈ ರಾಶಿಯವರಿಗೆ ಸಿಗಲಿದೆ ಶುಭಫಲ

ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ಒದಗಿಸಿದ್ದಾರೆ. ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ಒದಗಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News