ಸದ್ದು ಮಾಡುತ್ತಿದೆ UI ಚಿತ್ರದ 'ಸೌಂಡ್ ಆಫ್ ಯುಐ': ಉಪ್ಪಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ಅಕ್ಟೋಬರ್ʼನಲ್ಲಿ ತೆರೆಗೆ

"ಯುಐ" ಚಿತ್ರದ ಮ್ಯೂಸಿಕ್ ಗೆ ಸಂಬಂಧ ಪಟ್ಟ ಕೆಲಸಗಳು ಅಜನೀಶ್ ಲೋಕನಾಥ್, ಸಿ.ಆರ್ ಬಾಬಿ ಹಾಗೂ ಉಪೇಂದ್ರ ಅವರ ಸಾರಥ್ಯದಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದಿದೆ.

Written by - YASHODHA POOJARI | Last Updated : Aug 25, 2024, 08:31 PM IST
    • ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ‘ಯುಐ’ (UI) ಚಿತ್ರ
    • ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್
    • 1 ನಿಮಿಷ 24 ಸೆಕೆಂಡ್ ಗಳ ಈ ಮ್ಯೂಸಿಕ್ ಝಲಕ್
ಸದ್ದು ಮಾಡುತ್ತಿದೆ UI ಚಿತ್ರದ 'ಸೌಂಡ್ ಆಫ್ ಯುಐ': ಉಪ್ಪಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ಅಕ್ಟೋಬರ್ʼನಲ್ಲಿ ತೆರೆಗೆ title=
File Photo

ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ‘ಯುಐ’ (UI) ಚಿತ್ರ ಆರಂಭದಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರ. ಇತ್ತೀಚೆಗೆ ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್ ‘ಸೌಂಡ್ ಆಫ್ ಯುಐ’ ಬಿಡುಗಡೆಯಾಗಿದೆ. 1 ನಿಮಿಷ 24 ಸೆಕೆಂಡ್ ಗಳ ಈ ಮ್ಯೂಸಿಕ್ ಝಲಕ್ʼನಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮೋಡಿ ಮಾಡಿದ್ದಾರೆ. ಮುಂದೆ ಬಿಡುಗಡೆಯಾಗಲಿರುವ ಹಾಡುಗಳ ಬಗ್ಗೆ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ಇಯರ್‌ ಫೋನ್‌ ಬಳಸಿ ಹಾಡು ಕೇಳುತ್ತಾ ಮಲಗುವ ಅಭ್ಯಾಸ ನಿಮಗಿದ್ಯಾ?

"ಯುಐ" ಚಿತ್ರದ ಮ್ಯೂಸಿಕ್ ಗೆ ಸಂಬಂಧ ಪಟ್ಟ ಕೆಲಸಗಳು ಅಜನೀಶ್ ಲೋಕನಾಥ್, ಸಿ.ಆರ್ ಬಾಬಿ ಹಾಗೂ ಉಪೇಂದ್ರ ಅವರ ಸಾರಥ್ಯದಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದಿದೆ. 15 ವಯೊಲಿನ್, 8 ಬೇಸ್ ಗಿಟಾರ್, 4 ಕೊಳಲು ಹೀಗೆ ಹಲವು ಇನ್‌ಸ್ಟ್ರುಮೆಂಟ್ಸ್ ಬಳಸಿಕೊಂಡು 90ಕ್ಕೂ ಅಧಿಕ ನುರಿತ ಸಂಗೀತಗಾರರು ಲೈವ್ ನಲ್ಲೇ ಕಾರ್ಯ ನಿರ್ವಹಿಸಿರುವುದು ವಿಶೇಷ. ಚಿತ್ರದಲ್ಲಿ ಬಿಜಿಎಂ ಪ್ರಮುಖಪಾತ್ರ ವಹಿಸಿದೆ. ಹಂಗೇರಿಯಲ್ಲಿ ನಡೆದ ಈ ಮ್ಯೂಸಿಕ್ ಜರ್ನಿಯ ಒಂದು ಝಲಕ್ ಅನ್ನು ಚಿಕ್ಕ ಪ್ರೋಮೊ ಮೂಲಕ "ಸೌಂಡ್ ಆಫ್ ಯುಐ" ಹೆಸರಿನಲ್ಲಿ ಚಿತ್ರತಂಡ ರಿಲೀಸ್ ಮಾಡಿದೆ.

ಇದನ್ನೂ ಓದಿ: ಮಧುಮೇಹಕ್ಕೆ ವರದಾನವಿದ್ದಂತೆ ಈ ನೀರು: ಬೆಳಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿದರೆ ದಿನವಿಡೀ ಕಂಟ್ರೋಲ್ʼನಲ್ಲಿರುತ್ತೆ ಬ್ಲಡ್ ಶುಗರ್!

 ಹಲವು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ "ಯುಐ" ಚಿತ್ರವನ್ನು ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು),  ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ. ಬಹು ನಿರೀಕ್ಷೆಯಿರುವ ‘ಯುಐ’ ಚಿತ್ರ ವಿಶ್ವದಾದ್ಯಂತ ವಿಜಯಪತಾಕೆ ಹಾರಿಸಲಿದೆ.  ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News