Unlock Raghava: ‘ಅನ್ಲಾಕ್ ರಾಘವ’ ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ..!

MOODS OF RAGHAVA: ‘ಮೂಡ್ಸ್ ಆಫ್ ರಾಘವ’ ಟೀಸರ್ ಇಂದು ಸಂಜೆ(ಅ.4) A2 ಮ್ಯೂಸಿಕ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Written by - YASHODHA POOJARI | Edited by - Puttaraj K Alur | Last Updated : Oct 4, 2023, 10:09 PM IST
  • ಸ್ಯಾಂಡಲ್‍ವುಡ್‍ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಅನ್‍ಲಾಕ್ ರಾಘವ’ ಸಿನಿಮಾ
  • ‘ಅನ್‍ಲಾಕ್ ರಾಘವ’ ಚಿತ್ರತಂಡದಿಂದ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿಸುದ್ದಿ ಬಂದಿದೆ
  • A2 ಮ್ಯೂಸಿಕ್‍ನಲ್ಲಿ ‘ಮೂಡ್ಸ್ ಆಫ್ ರಾಘವ’ ಟೀಸರ್ ಬಿಡುಗಡೆಯಾಗಿದೆ
Unlock Raghava: ‘ಅನ್ಲಾಕ್ ರಾಘವ’ ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ..! title=
‘ಮೂಡ್ಸ್ ಆಫ್ ರಾಘವ’ ಟೀಸರ್ ಬಿಡುಗಡೆ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್‍ಲಾಕ್ ರಾಘವ’ ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.

ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಇಂದು ಸಂಜೆ(ಅ.4) ಸರಿಯಾಗಿ 5.04ಕ್ಕೆ A2 ಮ್ಯೂಸಿಕ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಟೀಸರ್ ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್‍ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್‍ವುಡ್‍ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ಕಾಂತಾರ ಚಿತ್ರಕ್ಕೆ 1 ವರ್ಷ...! ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಸಜ್ಜಾದ ಹೊಂಬಾಳೆ

‘ಅನ್‍ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಿಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.

ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಾಧು ಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. ಟೀಸರ್‍ನ ಮಿಸ್ ಮಾಡದೇ ನೋಡಿ.. ರಾಘವನಿಗೆ ನಿಮ್ಮ ಪ್ರೋತ್ಸಾಹ ನೀಡಿ ಎನ್ನುತ್ತಿದೆ ಚಿತ್ರತಂಡ.

ಇದನ್ನೂ ಓದಿ: ಕಿರುತೆರೆಯಿಂದ ಹಿರಿತೆರೆಯತ್ತ ಜನಪ್ರಿಯ ಧಾರಾವಾಹಿಗಳ ನಟಿ ಗಗನ ಕುಂಚಿ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News