UI movie release date: ನಟ, ನಿರ್ದೇಶಕ ಉಪೇಂದ್ರ ಅವರ ಬಹುನಿರೀಕ್ಷಿತ ಸಿನಿಮಾ ‘ಯುಐ’. ಟೈಟಲ್‌ ಮತ್ತು ಪೋಸ್ಟರ್‌ ಮೂಲಕವೇ ಸಾಕಷ್ಟು ಸದ್ದು ಮಾಡಿದ್ದ ಯುಐ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ನಟ ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಯುಐ ಸಿನಿಮಾ ರಿಲೀಸ್ ಡೇಟ್‌ ಅನ್ನು ಅನೌನ್ಸ್‌ ಮಾಡಿದ್ದಾರೆ. ಎಂಟು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ಇದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. 


ಇದನ್ನೂ ಓದಿ: ಖಾಸಗಿ ವೀಡಿಯೋಗಳನ್ನು ಲೀಕ್ ಮಾಡುವುದಾಗಿ ಅನನ್ಯಾ ಪಾಂಡೆಗೆ ಬೆದರಿಕೆ ಹಾಕಿದ ಸ್ಟಾರ್ ನಟನ ಪುತ್ರ!!


ʻನಾನು’ ಮತ್ತು ‘ನೀನು’ ಎಂಬ ಅರ್ಥ ನೀಡುವ ಶೀರ್ಷಿಕೆ ಹೊಂದಿರುವ ಈ ಚಿತ್ರದಲ್ಲಿ ರೀಷ್ಮಾ ನಾಣಯ್ಯ ನಾಯಕಿಯಾಗಿದ್ದಾರೆ. ಅಜನೀಶ್ ಲೋಕನಾಥ್‌ ಸಂಗೀತ ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. 


ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದು, ಟೈಟಲ್‌ ಮೂಲಕವೇ ಜನರ ತಲೆಗೆ ಹುಳ ಬಿಟ್ಟಿದ್ದಾರೆ. ಕೆ.ಪಿ. ಶ್ರೀಕಾಂತ್ ಮತ್ತು ಜಿ. ಮನೋಹರನ್ ಬಂಡವಾಳ ಹೂಡಿದ್ದಾರೆ. ಉಪೇಂದ್ರ, ರವಿಶಂಕರ್‌, ಅಚ್ಯುತ್‌ಕುಮಾರ್‌, ಸಾಧುಕೋಕಿಲ ಈ ಸಿನಿಮಾದಲ್ಲಿ ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 


ಯುಐ ಸಿನಿಮಾ ಇದೇ ಡಿಸೆಂಬರ್ 20 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಉಪೇಂದ್ರ ಅವರ ಡೈರಕ್ಷನ್‌ ಕಮಾಲ್‌ ಈ ಸಿನಿಮಾದಲ್ಲಿ ಕಾಣಬಹುದಾಗಿದೆ.


 


Baba Siddique : ಬಾಬಾ ಸಿದ್ದಿಕಿ ಹತ್ಯೆ ಹಿಂದೆ ಇರೋದ್ಯಾರು? ಸಲ್ಮಾನ್‌ ಖಾನ್‌ಗೆ ಬೆದರಿಕೆ ಹಾಕಿದ್ದ ಆತನೇ ಈ ಕೊಲೆಯ ಮಾಸ್ಟರ್‌ ಮೈಂಡ್!?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.