Kabzaa Trailer : ʼಕಬ್ಜʼ ಭಾರತೀಯ ಸಿನಿರಂಗದಲ್ಲಿ ಸಖತ್‌ ಸದ್ದು ಮಾಡುತ್ತಿರುವ ಕನ್ನಡಿಗರ ಸಿನಿಮಾ. ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಈ ಸಿನಿಮಾಗೆ ನಿರ್ದೇಶಕ ಆರ್ ಚಂದ್ರು ಆಕ್ಷನ್‌ ಕಟ್‌ ಹೇಳಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ನಟಿಸಿರುವ ಪ್ಯಾನ್ ಇಂಡಿಯಾ "ಕಬ್ಜ" ಚಿತ್ರದ ಹಾಡುಗಳು ಹಾಗೂ ಟೀಸರ್ ಈಗಾಗಲೇ ಜಗತ್ತಿನಾದ್ಯಂತ ಜನಪ್ರಿಯವಾಗಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಯಾವಾಗ? ಎಂದು ಕಾತುರದಿಂದ ಕಾಯುತ್ತಿದ್ದ ಪ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಇಕ್ಕಿದೆ. 


COMMERCIAL BREAK
SCROLL TO CONTINUE READING

ಹೌದು.. ಕೊನೆಗೂ ಎಲ್ಲರ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಕಬ್ಜ ಚಿತ್ರದ ಟ್ರೈಲರ್‌ ಬಿಡುಗಡೆಗೆ ಸಮಯ ನಿಗದಿಯಾಗಿದೆ. ಮಾರ್ಚ್ 4 ರ ಶನಿವಾರ ಸಂಜೆ 5 ಗಂಟೆ 2 ನಿಮಿಷಕ್ಕೆ 'ಕಬ್ಜ' ಚಿತ್ರದ ಎಲ್ಲಾ ಭಾಷೆಗಳ ಟ್ರೈಲರ್‌ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ರಿಲೀಸ್‌ ಆಗಲಿದೆ. ಇನ್ನು ಕಳೆದ ತಿಂಗಳು ಕಬ್ಜ ಸಿನಿಮಾದ ಭಾಯ್‌.. ಭಾಯ್‌.. ಎಂಬ ಹಾಡು ಬಿಡುಗಡೆಯಾಗಿತ್ತು. ಇತ್ತೀಚಿಗೆ ಚುಮ್‌ ಚುಮ್‌ ಚಳಿ ಎಂಬ ಐಟಂ ಸಾಂಗ್‌ ರಿಲೀಸ್‌ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.


ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಸ್ಯಾಂಡಲ್‌ವುಡ್‌ ಟಾಪ್ ನಟ-ನಟಿಯರು ಇವರು!


ಕಬ್ಜಾ ಸಿನಿಮಾಗೆ ಆರ್​. ಚಂದ್ರು ಆಕ್ಷನ್‌ ಕಟ್‌ ಹೇಳಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಮತ್ತು ಕಿಚ್ಚ ಸುದೀಪ್​ ಮುಖ್ಯ ಭೂಮಿಕೆ ನಟಿಸಿದ್ದಾರೆ. ಶ್ರೀಯಾ ಶರಣ್​ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನದ ಜೊತೆ ಗೀತೆಗೆ ಅವರೇ ಸಾಹಿತ್ಯ ಬರೆದಿದ್ದಾರೆ. ಮಾರ್ಚ್​ 17 ಪುನೀತ್‌ ರಾಜಕುಮಾರ್‌ ಅವರ ಹುಟ್ಟುಹಬ್ಬದ ದಿನದಂದು ʼಕಬ್ಜʼ ಸಿನಿಮಾ ಬಿಡುಗಡೆ ಆಗಲಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.