ಬಹು ನಿರೀಕ್ಷಿತ "ಹೋಮ್ ಮಿನಿಸ್ಟರ್" ಈ ಚಿತ್ರ ಏಪ್ರಿಲ್ ಒಂದರಂದು ಬಿಡುಗಡೆಯಾಗಲು (Home minister Release Date) ಸಕಲ ರೀತಿಯಲ್ಲೂ ಸಜ್ಜಾಗಿದೆ. ಇದೀಗ ಈ ಸಿನಿಮಾದ ಹಾಡುಗಳು ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಹಾಡುಗಳ ಬಿಡುಗಡೆಯಾಗಿ ಅಭಿಮಾನಿಗಳ ದಿಲ್ ಖುಷ್ ಆಗಿದೆ.
ಇದನ್ನೂ ಓದಿ: ಕಿರುತೆರೆಗೆ ಬಂಡವಾಳ ಹಾಕಿರೋ ನಟ, ನಟಿಯರು ಯಾರ್ಯಾರು ಗೊತ್ತಾ..?
ರಿಯಲ್ ಸ್ಟಾರ್ ಉಪೇಂದ್ರ (Upendra) ನಾಯಕರಾಗಿ ನಟಿಸಿರುವ "ಹೋಮ್ ಮಿನಿಸ್ಟರ್" ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರೋದ್ರಿಂದ ಉಪ್ಪಿ ಅಭಿಮಾನಿಗಳು ಕೂಡ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತು ವೈಟ್ ಮಾಡುತ್ತಿದ್ದಾರೆ.
ಜಿಬ್ರಾನ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂದ್ ಆಡಿಯೋ (Anand Audio) ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ.
ಸಚಿವ ಮುನಿರತ್ನ, ಗೋಲ್ಡನ್ ಸ್ಟಾರ್ ಗಣೇಶ್ (Ganesh), ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿರಂಜನ್ ಸುಧೀಂದ್ರ, ಪ್ರಿಯಾಂಕ ಉಪೇಂದ್ರ ಹಾಗೂ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.
ಕೊರೊನಾ (Corona) ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಯಿತು. ಚಿತ್ರದ ಕಥೆ ಕೇಳಿದಾಗ ನನಗೆ ಒಂದು ಕಡೆ ಇಷ್ಟವಾಗುತ್ತಿದೆ. ಮತ್ತೊಂದು ಕಡೆಯಿಂದ ಭಯ. ಜನ ಈ ಕಥೆಯನ್ನು ಯಾವರೀತಿ ತೆಗೆದುಕೊಳ್ಳುತ್ತಾರೋ? ಎಂದು.ಕೊನೆಗೆ ನಿರ್ಮಾಪಕ ಪೂರ್ಣಚಂದ್ರ ನಾಯ್ಡು ಅವರು, ಈ ಸಿನಿಮಾ ಮಾಡೋಣ ಸರ್. ಎಲ್ಲರಿಗೂ ಹಿಡಿಸುತ್ತದೆ ಎಂದು ಭರವಸೆ ನೀಡಿದರು. ಇದೇ ಏಪ್ರಿಲ್ ಒಂದರಂದು ಚಿತ್ರ ಬಿಡುಗಡೆಯಾಗುತ್ತಿದೆ. ಜನ ಮೆಚ್ಚಿಕೊಳ್ಳುತ್ತಾರೆಂಬ ನಿರೀಕ್ಷೆಯಿದೆ. ನನ್ನೊಂದಿಗೆ ನಟಿಸಿರುವ ವೇದಿಕ , ತಾನ್ಯ ಹೋಪ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನಮ್ಮ ಕರೆಗೆ ಓಗೊಟ್ಟು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ ಎಂದರು ಉಪೇಂದ್ರ.
ಚಿತ್ರದಲ್ಲಿ ನಟಿಸಿರುವ ವೇದಿಕ, ತಾನ್ಯ ಹೋಪ್, ಚಾಂದಿನಿ, ವಿನಯ್ ಚಂಡೂರ್, ಸಂಭಾಷಣೆ ಬರೆದಿರುವ ಧರ್ಮೇಂದ್ರ, ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು, ಶ್ರೀಕಾಂತ್ ವೀರಮಾಚನೇನಿ ಹಾಗೂ ಚಿತ್ರವನ್ನು ಬಿಡುಗಡೆ ಮಾಡುತ್ತಿರುವ ಬೆಂಗಳೂರು ಕುಮಾರ್ ಫಿಲಂಸ್ ನ ಕುಮಾರ್ "ಹೋಮ್ ಮಿನಿಸ್ಟರ್" ಕುರಿತು ಮಾತನಾಡಿ ಸಿನಿಮಾ (Kannada Movie) ಹಿಟ್ ಆಗುವ ಭರವಸೆ ಇದೆ ಅಂದ್ರು.
ಇದನ್ನೂ ಓದಿ: ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯರಿಂದ ಏಕಪಾತ್ರಾಭಿನಯ: ಬಿಜೆಪಿ ವ್ಯಂಗ್ಯ
ಸುಜಯ್ ಕೆ ಶ್ರೀಹರಿ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ವೇದಿಕ, ತಾನ್ಯ ಹೋಪ್, ಚಾಂದಿನಿ, ಸುಮನ್ ರಂಗನಾಥ್, ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ತಿಲಕ್, ಅವಿನಾಶ್, ಮಾಳವಿಕ ಅವಿನಾಶ್, ಲಾಸ್ಯ ಮುಂತಾದವರಿದ್ದಾರೆ.
ಉಪೇಂದ್ರ ಅವರ ಸಿನಿಮಾ ಅಂದ್ರೆ ಆ ಸಿನಿಮಾದಲ್ಲಿ ಎಲ್ಲೂ ಕಂಡಿರದ ಹೊಸ ಟ್ವಿಸ್ಟ್ಗಳನ್ನ ನೋಡಬಹುದು. ನೋಡೋಣ ಈ ಸಿನಿಮಾ ತೆರೆಗೆ ಅಪ್ಪಳಿಸಿ ಯಾವ ರೀತಿ ಕ್ರೇಜ್ ಹುಟ್ಟಿಸುತ್ತೆ ಅಂತ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.