ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 3.34 ಕ್ಕೆ ಸಾವನ್ನಪ್ಪಿದ್ದಾರೆ.
ವಿಜಯ್ ನಿಧನ(Sanchari Vijay Death)ಕ್ಕೆ ರಾಜಕೀಯ ನಾಯಕರು, ಸಿನಿಮಾ ನಟರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಇದೀಗ ಅಮೆರಿಕ ರಾಯಭಾರಿ ಕಚೇರಿಯೂ ಕನ್ನಡದಲ್ಲಿ ಸಂತಾಪ ಸೂಚಿಸಿದೆ.
ಇದನ್ನೂ ಓದಿ : Sanchari Vijay Passes Away : ಸಂಚಾರ ಮುಗಿಸಿದ ಸಂಚಾರಿ ವಿಜಯ್!
ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವ ಅಮೆರಿಕ ರಾಯಭಾರಿ ಕಚೇರಿ(US Embassy), ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು, 2018ರಲ್ಲಿ ಚೆನ್ನೈನ ಅಮೆರಿಕದ ದೂತಾವಾಸದಲ್ಲಿ ಪ್ರೈಡ್ ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ 'ನಾನು ಅವನಲ್ಲ.ಅವಳು' ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್ ಎಂದು ಟ್ವೀಟ್ ಮಾಡಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. #RIP
— US Consulate Chennai (@USAndChennai) June 15, 2021
ಇದನ್ನೂ ಓದಿ : Sanchari Vijay Health Condition : 'ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.