ವಾಲ್ಮೀಕಿ ನಿಗಮ ಹಗರಣ : ಜುಲೈ 22ರವರೆಗೆ ಬಿ ನಾಗೇಂದ್ರ ಜಾರಿ ನಿರ್ದೇಶನಾಲಯದ ಕಸ್ಟಡಿಗೆ 

B Nagendra case : ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

Written by - Bhavya Sunil Bangera | Edited by - Krishna N K | Last Updated : Jul 18, 2024, 07:13 PM IST
    • ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ
    • ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ
    • ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
ವಾಲ್ಮೀಕಿ ನಿಗಮ ಹಗರಣ : ಜುಲೈ 22ರವರೆಗೆ ಬಿ ನಾಗೇಂದ್ರ ಜಾರಿ ನಿರ್ದೇಶನಾಲಯದ ಕಸ್ಟಡಿಗೆ  title=
b nagendra

Valmiki corp scam : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ 95 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದಲ್ಲಿನ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಮತ್ತೆ ಐದು ದಿನ ಅಂದರೆ ಜುಲೈ 22ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಗುರುವಾರ ಆದೇಶಿಸಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಿದರು.

ಇದನ್ನೂ ಓದಿ:ಯಕೃತ್ತಿನ ಕ್ಯಾನ್ಸರ್ ನ ಈ ಗುಣಲಕ್ಷಣಗಳನ್ನು ನಿರ್ಲಕ್ಷಿಸಬೇಡಿ..!

ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಅವರು ಪ್ರಕರಣದ ತನಿಖೆ ನಡೆಯುತ್ತಿದ್ದು, ಇನ್ನೂ ಸಾಕಷ್ಟು ಮಾಹಿತಿಯನ್ನು ನಾಗೇಂದ್ರ ಅವರಿಂದ ಸಂಗ್ರಹಿಸಬೇಕಿದೆ. ಹೀಗಾಗಿ, ಅವರ ಕಸ್ಟಡಿ ಅವಧಿ ವಿಸ್ತರಿಸಬೇಕು ಎಂದು ಕೋರಿದರು.

ಜಾರಿ ನಿರ್ದೇಶನಾಲಯದ ಪರವಾಗಿ ಸಲ್ಲಿಸಲಾಗಿದ್ದ ರಿಮ್ಯಾಂಡ್‌ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು ನಾಗೇಂದ್ರ ಅವರನ್ನು ಮತ್ತೆ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಆದೇಶಿಸಿದರು. ಜಾರಿ ನಿರ್ದೇಶನಾಲಯವು ನಾಗೇಂದ್ರ ಸೇರಿ ಹಲವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್‌ 3 ಮತ್ತು 4ರ ಅಡಿ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಡೆಂಗ್ಯೂ ರೋಗಕ್ಕೆ ಈ ಪ್ರಾಣಿಯ ಹಾಲು ಉತ್ತಮ..!? ಬಲಿಯಾಗುವ ಮುಂಚೆ ತಪ್ಪದೇ ತಿಳಿದುಕೊಳ್ಳಿ..

ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ ಬಿ ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶರಾಮ ದುರ್ಗಣ್ಣವರ ಅವರು ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಅದರ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News