ಬಿಡುಗಡೆಗೆ ಸಜ್ಜಾದ 'ವಾಸಂತಿ ನಲಿದಾಗ' ಸಿನಿಮಾ

ಜೇನುಗೂಡು ಸಿನಿಮಾ ಬ್ಯಾನರ್‌ನಡಿ ಕೆ.ಎನ್.ಶ್ರೀಧರ್ ನಿರ್ಮಾಣ ಮಾಡಿರುವ ‘ವಾಸಂತಿ ನಲಿದಾಗ ಸಿನಿಮಾ’ದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. 

Written by - Zee Kannada News Desk | Last Updated : May 21, 2022, 08:02 PM IST
  • ಈ ಹಿಂದೆ ಪುಟಾಣಿ ಸಫಾರಿ, ವರ್ಣಮಯ ಸಿನಿಮಾ ನಿರ್ದೇಶನ ಮಾಡಿದ್ದ ರವೀಂದ್ರ ವಂಶಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು,
  • ಯುವ ಪ್ರತಿಭೆಗಳಾದ ರೋಹಿತ್ ಶ್ರೀಧರ್ ನಾಯಕನಾಗಿ ಹಾಗೂ ಭಾವನಾ ಶ್ರೀನಿವಾಸ್ ನಾಯಕಿಯಾಗಿ ನಟಿಸಿದ್ದಾರೆ.
 ಬಿಡುಗಡೆಗೆ ಸಜ್ಜಾದ 'ವಾಸಂತಿ ನಲಿದಾಗ' ಸಿನಿಮಾ title=

ಬೆಂಗಳೂರು: ಜೇನುಗೂಡು ಸಿನಿಮಾ ಬ್ಯಾನರ್‌ನಡಿ ಕೆ.ಎನ್.ಶ್ರೀಧರ್ ನಿರ್ಮಾಣ ಮಾಡಿರುವ ‘ವಾಸಂತಿ ನಲಿದಾಗ ಸಿನಿಮಾ’ದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. 

ಈ ಹಿಂದೆ ಪುಟಾಣಿ ಸಫಾರಿ, ವರ್ಣಮಯ ಸಿನಿಮಾ ನಿರ್ದೇಶನ ಮಾಡಿದ್ದ ರವೀಂದ್ರ ವಂಶಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಯುವ ಪ್ರತಿಭೆಗಳಾದ ರೋಹಿತ್ ಶ್ರೀಧರ್ ನಾಯಕನಾಗಿ ಹಾಗೂ ಭಾವನಾ ಶ್ರೀನಿವಾಸ್ ನಾಯಕಿಯಾಗಿ ನಟಿಸಿದ್ದಾರೆ. ಜೀವಿತ ವಸಿಷ್ಠ, ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಸೇರಿದಂತೆ ಒಂದಷ್ಟು ಅನುಭವಿ ಕಲಾವಿದರು ಸಿನಿಮಾದಲ್ಲಿದ್ದಾರೆ.

ಇದನ್ನೂ ಓದಿ: Pension Scheme : ಸರ್ಕಾರದ ಈ ಯೋಜನೆಯಲ್ಲಿ ಪಡೆಯಿರಿ ₹60,000 ಪಿಂಚಣಿ!

ನಿಜವಾಗಲೂ ಸಂತೋಷವಾಗುತ್ತಿದೆ. ಸುಧಾರಾಣಿ ನನ್ನ ಮೊದಲ ಜೋಡಿ. ಈ ಸಿನಿಮಾದಲ್ಲೂ ಮತ್ತೆ ಜೋಡಿಯಾಗಿ ನಟಿಸುತ್ತಿದ್ದೇವೆ.‌ ನಾನು ಬ್ಯುಸಿನೆಸ್ ಮ್ಯಾನ್. ಮಗ ಅಂದ್ರೆ ಇಷ್ಟ. ತುಂಬಾ ಇಂಟ್ರೆಸ್ಟಿಂಗ್ ಇರುವ ಪಾತ್ರ. ವಾಸಂತಿ ನಲಿದಾಗ ತುಂಬಾ ಸುಂದರವಾದ ಟೈಟಲ್. ವಂಡರ್‌ಫುಲ್ ಸ್ಟಾರ್ ಕಾಸ್ಟ್, ಟೆಕ್ನಿಷಿಯನ್ ಎಂದು ಸಾಯಿಕುಮಾರ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ಮಂಜು ಪಾವಗಡ ಮಾತನಾಡಿ, ರವೀಂದ್ರ ಸರ್‌ಗೆ ಧನ್ಯವಾದ. ಒಳ್ಳೆ ಪಾತ್ರ ಕೊಟ್ಟಿದ್ದಾರೆ. ಸಿನಿಮಾದಲ್ಲಿ ಅದ್ಭುತ ಸನ್ನಿವೇಶಗಳಿವೆ.ಡೈಲಾಗ್ ತುಂಬಾ ಚೆನ್ನಾಗಿವೆ. ಇಷ್ಟೆಲ್ಲಾ ಸೀನ್ ಮಾಡಿದ್ರೂ ಹೀರೋಯಿನ್ ಕಾಣಿಸಿಲ್ಲ. ಆಮೇಲೆ ನಂಬರ್ ಕೊಟ್ರೆ ಕಷ್ಟ-ಸುಖ ಮಾತಾಡೋಣಾ ಎಂದು ತಮಾಷೆ ಮಾಡಿದರು.

ಇದನ್ನೂ ಓದಿ : IPL 2022: ಅಮೋಘ ಪ್ರದರ್ಶನ ನೀಡುತ್ತಿರುವ ಫಾಸ್ಟ್ ಬೌಲರ್ .! ಜಹೀರ್ ಖಾನ್ ಗೆ ಹೋಲಿಸುತ್ತಿರುವ ಫ್ಯಾನ್ಸ್

ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ವಾಸಂತಿ ನಲಿದಾಗ ಸಿನಿಮಾಗೆ ಶ್ರೀಗುರು ಸಂಗೀತವಿದ್ದು, ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್,  ಗೌಸ್ ಪೀರ್ ಸಾಹಿತ್ಯವಿದೆ. ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾಗ್ರಾಹಣವಿದ್ದು, ಸದ್ಯದಲ್ಲಿಯೇ ಸಿನಿಮಾ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News