VIP Movie first look: ವಸಿಷ್ಠ ಸಿಂಹ ನಟನೆಯ ʻವಿಐಪಿʼ ಸಿನಿಮಾದ ಫಸ್ಟ್ ಲುಕ್ ರಿಲೀಸ್‌

VIP Movie First Look: ಫಸ್ಟ್ ಲುಕ್ ನಲ್ಲಿ ವಸಿಷ್ಠ ಸಿಂಹ ಬ್ಯಾಟ್ ಹಿಡಿದಿದ್ದಾರೆ. ಮಾಸ್ ಫೀಲ್ ಇರುವಂತಹ ಪೋಸ್ಟರ್ ಕುತೂಹಲ ಮೂಡಿಸಿದೆ. 

Written by - YASHODHA POOJARI | Last Updated : Mar 24, 2024, 09:25 PM IST
    • ವಸಿಷ್ಠ ಸಿಂಹ ಅಭಿನಯದ ʻವಿಐಪಿʼ ಸಿನಿಮಾ
    • ಮಾಸ್ ಫೀಲ್ ಇರುವ ಸಿನಿಮಾ
    • ʻವಿಐಪಿʼ ಸಿನಿಮಾದ ಫಸ್ಟ್ ಲುಕ್ ರಿಲೀಸ್‌
VIP Movie first look: ವಸಿಷ್ಠ ಸಿಂಹ ನಟನೆಯ ʻವಿಐಪಿʼ ಸಿನಿಮಾದ ಫಸ್ಟ್ ಲುಕ್ ರಿಲೀಸ್‌  title=

VIP Movie First Look Release: ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ "ವಿಐಪಿ" ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.  

ಆದಿಚುಂಚನಗಿರಿ ಮಠದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇವರ ದಿವ್ಯ ಸಾನಿಧ್ಯದಲ್ಲಿ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ನಾಯಕ ವಸಿಷ್ಠ ಸಿಂಹ ಹಾಗೂ ಚಿತ್ರತಂಡ ಉಪಸ್ಥಿತರಿದ್ದರು. ಫಸ್ಟ್ ಲುಕ್ ನಲ್ಲಿ ವಸಿಷ್ಠ ಸಿಂಹ ಬ್ಯಾಟ್ ಹಿಡಿದಿದ್ದಾರೆ. ಮಾಸ್ ಫೀಲ್ ಇರುವಂತಹ ಪೋಸ್ಟರ್ ಕುತೂಹಲ ಮೂಡಿಸಿದೆ. 

ಇದನ್ನೂ ಓದಿ: ಮಾಧುರಿ ದೀಕ್ಷಿತ್‌ ಕೂದಲಿಗೆ ಇದೇ ಎಣ್ಣೆ ಹಾಕೋದಂತೆ.. ಕಪ್ಪಾದ ಹೊಳೆಯುವ ಕೇಶರಾಶಿಯ ರಹಸ್ಯ ಇಲ್ಲಿದೆ..! 

ಬಹು ನಿರೀಕ್ಷಿತ ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಎರಡು ಹಂತಗಳ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಮಾತಿನ‌ ಭಾಗದ ಚಿತ್ರೀಕರಣ ಹಾಗೂ "ಕೆ.ಜಿ.ಎಫ್" ಖ್ಯಾತಿಯ ವಿಕ್ರಂ ಮೋರ್ , "ಯುವ" ಖ್ಯಾತಿಯ ಅರ್ಜುನ್ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.  

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್ . ಮೋಹನ್ ಕುಮಾರ್ ಹಾಗೂ ಆರ್ ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ: ಬಿಗ್‌ ಬಾಸ್‌ ಸ್ನೇಹಿತ್‌ ಗೌಡ ಮದುವೆ ಫೋಟೋಸ್‌ ವೈರಲ್..‌ ಇವರ ಕೈ ಹಿಡದ ಆ ಬೆಡಗಿ ಯಾರು !? 

ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ನಿಂದ ಸದ್ದು ಮಾಡುತ್ತಿರುವ "ವಿಐಪಿ" ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ ,  ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.  

ರಾಜೀವ್ ಗಣೇಸನ್  ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ,  ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರದಲ್ಲಿರಲಿದೆ ಎಂದು ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News