ನವದೆಹಲಿ : ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇಂದು (ಜುಲೈ 7) ಬೆಳಿಗ್ಗೆ ನಿಧನರಾಗಿದ್ದಾರೆ.
ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್(Dilip Kumar) ಚಿಕಿತ್ಸೆ ನೀಡುತ್ತಿದ್ದ ಶ್ವಾಸಕೋಶಶಾಸ್ತ್ರಜ್ಞ ಡಾ.ಜಲೀಲ್ ಪಾರ್ಕರ್ ಅವರು ದಿಲೀಪ್ ಕುಮಾರ್ ನಿಧನ ಸುದ್ದಿಯನ್ನ ದೃಢಪಡಿಸಿದ್ದಾರೆ.
ಇದನ್ನೂ ಓದಿ : Shagufta Ali : ಜೀವನ ನಡೆಸಲು ಕಾರು, ಚಿನ್ನಾಭರಣ ಮಾರಿದ ಪ್ರಖ್ಯಾತ ನಟಿ
ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರು ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆ(PD Hinduja Hospital)ಯಲ್ಲಿ ದಿಲೀಪ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದರು.
ಬಾಲಿವುಡ್(Bollywood) ನಲ್ಲಿ ತಮ್ಮ ಕಾಲದ ಅತೀ ಶ್ರೇಷ್ಠ ನಟರಲ್ಲಿ ಒಬ್ಬರೆಂದು ಅವರನ್ನು ಪರಿಗಣಿಸಲಾಗುತ್ತದೆ. 1994 ರಿಂದ 1996 ರವರೆಗೆ ಸುಮಾರು 61 ಚಿತ್ರಗಳಲ್ಲಿ ನಿತಿಸಿದ್ದರೆ. ಇವರ ಅಭಿನೇಯಕ್ಕೆ ಅನೇಕ ಪ್ರಶಸ್ತಿಗಳು ದೊರೆತಿವೆ. ಇವರು ಭಾರತೀಯ ಚಲನಚಿತ್ರ ರಂಗದ ಸರ್ವೋಚ್ಚ ಸನ್ಮಾನವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರೂ ಆಗಿದ್ದಾರೆ. ಅವರು ಭಾರತದ ರಾಜ್ಯಸಭೆಯ ಸದಸ್ಯರೂ ಆಗಿದ್ದರು.
Veteran actor Dilip Kumar passes away at the age of 98, says Dr Jalil Parkar, the pulmonologist treating the actor at Mumbai's PD Hinduja Hospital
(File pic) pic.twitter.com/JnmvQk8QIk
— ANI (@ANI) July 7, 2021
ಇದನ್ನೂ ಓದಿ : Arindam Pramanik: ಕೆಲಸ ಸಿಗದೆ ಮೀನು ಮಾರಾಟ ಮಾಡುತ್ತಿರುವ ನಟ
ದಿಲೀಪ್ ಕುಮಾರರ ಹುಟ್ಟು ಹೆಸರು ಮಹಮ್ಮದ್ ಯೂಸುಫ್ ಖಾನ್. ಈಗ ಪಾಕಿಸ್ತಾನದಲ್ಲಿರುವ ಪೇಶಾವರದ ಕಿಸ್ಸಾ ಖ್ವಾನಿ ಬಜಾರಿನ ಮೊಹಲ್ಲಾ ಖುದಾದಾದದಲ್ಲಿ ಇವರು 11 ಡಿಸೆಂಬರ್ 19922 ರಂದು ಜನಿಸಿದರು. ಆರು ಮಂದಿ ಗಂಡು ಮಕ್ಕಳ ಹಾಗೂ ಆರು ಮಂದಿ ಹೆಣ್ಣು ಮಕ್ಕಳ ದೊಡ್ಡ ಕುಟುಂಬ ಇವರದಾಗಿತ್ತು. ತಂದೆ ಲಾಲಾ ಘುಲಾಮ್ ಸರ್ವಾರ್ ಹಣ್ಣಿನ ಬೆಳೆಗಾರರೂ ವ್ಯಾಪಾರಿಯೂ ಆಗಿದ್ದರು. ಪೇಶಾವರದಲ್ಲೂ, ಮಹಾರಾಷ್ಟ್ರದ ನಾಶಿಕದ ಬಳಿಯ ದೇವಲಾಲಿ ಎಂಬಲ್ಲೂ ಹಣ್ಣಿನ ತೋಟಗಳಿದ್ದವು. 1930ರ ದಶಕದಲ್ಲಿ ಅವರ ಕುಟುಂಬ ಮುಂಬಯಿ ಬಂದು ನೆಲೆಸಿತು. ಹದಿಹರೆಯದ ಯುವಕ ಯೂಸುಫ್ ಖಾನ್ ಪುಣೆಯಲ್ಲಿ ಕ್ಯಾಂಟೀನ್ ಉದ್ಯವದಲ್ಲಿ ತೊಡಗಿ, ಜತೆಯಲ್ಲೇ ಒಣಹಣ್ಣುಗಳ ಸರಬರಾಜಿನ ವ್ಯಾಪಾರವನ್ನಾರಂಭಿಸಿದರು.
ಇದನ್ನೂ ಓದಿ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾರನ್ನು 'ಜಾತ್ಯತೀತ ನಾಯಿ' ಎಂದ ಕಂಗನಾ ರನೌತ್
ಅಂದಿನ ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಪಕರೂ ಬಾಂಬೇ ಟಾಕೀಸ್ ಸ್ಟೂಡಿಯೊ ಮಾಲಿಕರೂ ಆಗಿದ್ದ ಹಿಮಾಂಶು ರಾಯ್ ಅವರ ಪತ್ನಿ ದೇವಿಕಾ ರಾಣಿಯವರು ಹಿಂದಿ ಚಿತ್ರ ರಂಗವನ್ನು ಪ್ರವೇಶಿಸಲು ಯೂಸುಫ್ ಖಾನರಿಗೆ ಸಹಾಯ ಮಾಡಿದರು. 1944 ರಲ್ಲಿ ಭಗವತೀ ಚರಣ ವರ್ಮಾರವರು ತಮ್ಮ ಜ್ವಾರ್ ಭಾಟಾ ಚಿತ್ರದ ನಾಯಕನ ಪಾತ್ರವನ್ನಿತ್ತು ದಿಲೀಪ್ ಕುಮಾರ್ ಎಂದು ಹೆಸರಿಟ್ಟರು. ಅಮಿಯಾ ಚಕ್ರವರ್ತಿಯವರ ನಿರ್ದೇಶನದ ಈ ಚಿತ್ರದ ಪಾತ್ರವರ್ಗದಲ್ಲಿ ಮೃದುಲಾ, ಶಮೀಮ್, ಆಗಾ, ಕೆ ಎನ್ ಸಿಂಘ್, ಮುಮ್ತಾಜ್ ಅಲಿ, ಮೊದಲಾದವರಿದ್ದ ಈ ಚಿತ್ರದ ಸಂಗೀತ ನಿರ್ದೇಶಕರು ಅನಿಲ್ ಬಿಸ್ವಾಸ್ ಆಗಿದ್ದರು. ಆದರೂ ಚಿತ್ರ ಅಷ್ಟೇನೂ ಜನಪ್ರಿಯವಾಗಲಿಲ್ಲ.
ಇದನ್ನೂ ಓದಿ : Aamir Khan: 15 ವರ್ಷಗಳ ನಂತರ ಕಿರಣ್ ರಾವ್ ಅವರಿಂದ ಬೇರ್ಪಟ್ಟ ಅಮೀರ್ ಖಾನ್
1947ರಲ್ಲಿ ಬಿಡುಗಡೆಯಾದ ಜುಗ್ನು ಚಿತ್ರ ಜಯಪ್ರದವಾಯಿತು. ಬಳಿಕ ಅಂದಾಜ್ (1949), ದೀದಾರ್ (1951), ಆನ್ (1952), ಅಮರ್ (1954), ಆಜಾದ್ (1955), ದೇವದಾಸ್ (1955), ಮುಸಾಫಿರ್ (1957), ಮಧುಮತಿ (1958) ಮತ್ತು ಮುಘಲ್ ಎ ಆಜಮ್ (1960) ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಗೆಲುವನ್ನು ಪಡೆಯಿತಲ್ಲದೆ, ದಿಲೀಪ್ ಕುಮಾರರೂ ಚಿತ್ರರಂಗದಲ್ಲಿ ಅಮೋಘ ಖ್ಯಾತಿಯನ್ನು ಪಡೆದರು. ಅಂದಾಜ್ , ದೀದಾರ್ , ಅಮರ್ , ದೇವದಾಸ್, ಮಧುಮತಿ, ಇತ್ಯಾದಿ ಚಿತ್ರಗಳು ಶೋಕರಸಭರಿತ ಚಿತ್ರಗಳಾಗಿದ್ದು, ದಿಲೀಪ್ ಕುಮಾರರು ದುರಂತ ನಾಯಕನೆಂಬ ಬಿರುದನ್ನು ಪಡೆದರು.
ಇದನ್ನೂ ಓದಿ : Rocking Star Yash: ಐಷಾರಾಮಿ ಬಂಗಲೆಗೆ ಎಂಟ್ರಿ ಕೊಟ್ಟ 'ರಾಕಿ ಭಾಯ್' ದಂಪತಿ
ಭಾರತದ ಮುಘಲ್ ಇತಿಹಾಸದಿಂದಾಯ್ದ ಕತೆಯಿರುವ ಮುಘಲ್ ಎ ಆಜಮ್ ಆಗಿನ ಕಾಲದ ಶ್ರೀಮಂತ ಚಿತ್ರವಾಗಿದ್ದು, ಭಾರೀ ಜಯಗಳಿಸಿತ್ತು. ಉತ್ತರಾರ್ಧ ವರ್ಣದಲ್ಲಿದ್ದು ಕಪ್ಪು-ಬಿಳುಪಿನ ಈ ಚಿತ್ರ 2008ರಲ್ಲಿ ಕಂಪ್ಯೂಟರ್ ಸಹಾಯದಿಂದ ವರ್ಣರಂಜಿತಗೊಂಡು ಪ್ರದರ್ಶನಗೊಂಡಾಗ ಮತ್ತೆ ಆಗಿನಷ್ಟೇ ಜನಮೆಚ್ಚುಗೆಯನ್ನು ಪಡೆಯಿತು. 1961ರಲ್ಲಿ ಬಿಡುಗಡೆಯಾದ ಗಂಗಾ ಜಮುನಾ ದಿಲೀಪ್ ಕುಮಾರರ ಮೊದಲ ಪೂರ್ಣ ವರ್ಣ ಚಿತ್ರ. ಇದು ಅವರ ಸ್ವಂತ ನಿರ್ಮಾಣದ ಚಿತ್ರವೂ ಆಗಿತ್ತು. ಇದರಲ್ಲಿ ಅವರ ನಿಜ ಜೀವನದ ತಮ್ಮ ನಾಸಿರ್ ಖಾನ್ ತಮ್ಮನಾಗಿಯೇ ಅಭಿನಯಿಸಿದ್ದಾರೆ.
ಇದನ್ನೂ ಓದಿ : ಬಾಲಿವುಡ್ ನಟಿ ಯಾಮಿ ಗೌತಮ್ ಗೆ ಸಮನ್ಸ್ ಜಾರಿ ಮಾಡಿದ ಜಾರಿ ನಿರ್ದೇಶನಾಲಯ
1976ರವರೆಗೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ ಬಳಿಕ ೧೯೮೧ರವರೆಗೆ ಚಿತ್ರರಂಗದಿಂದ ದೂರವಿದ್ದರು. ಆ ನಂತರ ಪೋಷಕ ಪಾತ್ರಗಳಲ್ಲಿ ಅಭಿನಯಿಸಲಾರಂಭಿಸಿದರು. ಕ್ರಾಂತಿ (1981), ಶಕ್ತಿ (1982), ವಿಧಾತಾ (1982), ಮಶಾಲ್ (1984), ಕರ್ಮ (1986), ಸೌದಾಗರ್ (1991), ಇತ್ಯಾದಿ ಚಿತ್ರಗಳೂ ಜನಪ್ರಿಯವಾದವು. ಅವರ ಕೊನೆಯ ಚಿತ್ರ ಕಿಲಾ (1996) ಅಷ್ಟೇನೂ ಜನ ಮೆಚ್ಚುಗೆಯನ್ನು ಪಡೆಯಲಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.