Krishnam Raju: ಖ್ಯಾತ ನಟ ಮತ್ತು ನಿರ್ಮಾಪಕ ಕೃಷ್ಣಂ ರಾಜು ವಿಧಿವಶ
ಕೃಷ್ಣಂ ರಾಜು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಮೊದಲ ನಟ ಎಂಬ ಹೆಗ್ಗಳಿಕೆ ಹೊಂದಿದ್ದರು.
ಹೈದರಾಬಾದ್: ತೆಲುಗು ಚಿತ್ರರಂಗದ ಲೆಜೆಂಡರಿ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಹಲವಾರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಕ್ರಿಯಾಶೀಲರಾಗಿದ್ದ ಕೃಷ್ಣ ರಾಜು ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜುರಿಗೆ 82 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಟ ಕಮ್ ರಾಜಕಾರಣಿ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇತ್ತು. ಆದರೆ ಮಾಜಿ ಬಿಜೆಪಿ ನಾಯಕನ ಆರೋಗ್ಯ ಸುಧಾರಿಸಲು ಸಾಧ್ಯವಾಗಲಿಲ್ಲ.
Lucky Man: "ಅಪ್ಪು ಕುಳಿತಿದ್ದ ಆ ಚೇರ್ ಕೊಡಿ ಸಾಕು" - ಗಳಗಳನೇ ಅತ್ತ ರಾಘಣ್ಣ!
ತೆಲುಗು ಚಿತ್ರರಂಗದ ‘ರೆಬೆಲ್ ಸ್ಟಾರ್’!
Bigg Boss Kannada OTT : ಬಿಗ್ ಬಾಸ್ ಕನ್ನಡ ಒಟಿಟಿ : 5ನೇ ವಾರ ಮನೆಯಿಂದ ನಂದಿನಿ ಔಟ್
ರಾಜಕೀಯದಲ್ಲಿ ಸಕ್ರಿಯರಾಗಿದ್ದ ನಟ
1990ರ ದಶಕದ ಉತ್ತರಾರ್ಧದಲ್ಲಿ ಕೃಷ್ಣಂ ರಾಜು ರಾಜಕೀಯದಲ್ಲಿ ಸಕ್ರಿಯರಾದರು. ಬಿಜೆಪಿಗೆ ಸೇರಿದ್ದ ಈ ಹಿರಿಯ ನಟ ಕಾಕಿನಾಡ ಮತ್ತು ನರಸಾಪುರಂ ಕ್ಷೇತ್ರಗಳಿಂದ 12 ಮತ್ತು 13ನೇ ಲೋಕಸಭೆಗೆ ಆಯ್ಕೆಯಾಗಿದ್ದರು.1999ರಿಂದ 2004ರವರೆಗೆ 3ನೇ ವಾಜಪೇಯಿ ಸಚಿವಾಲಯದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2009ರ ಮಾರ್ಚ್‍ನಲ್ಲಿ ಅವರು ನಟ ಚಿರಂಜೀವಿ ಸ್ಥಾಪಿಸಿದ ಪ್ರಜಾರಾಜ್ಯಂ ಪಕ್ಷಕ್ಕೆ ಸೇರಿದ್ದರು. 2009ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಮಂಡ್ರಿ ಕ್ಷೇತ್ರದಿಂದ ಸಂಸದ ಸ್ಥಾನಕ್ಕೆ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.