ʼಜೋಗ್ 101ʼ ಚಿತ್ರದಲ್ಲಿ ವಿಜಯ ರಾಘವೇಂದ್ರ : ಸಸ್ಪೆನ್ಸ್ ಥ್ರಿಲ್ಲರ್ ಫಸ್ಟ್ ಲುಕ್ ರಿಲೀಸ್‌

 ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ "ಜೋಗ್ 101" ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

Written by - Krishna N K | Last Updated : Aug 31, 2023, 02:50 PM IST
  • ವಿಜಯ ರಾಘವೇಂದ್ರ ನಟನೆಯ "ಜೋಗ್ 101" ಫಸ್ಟ್‌ ಲುಕ್‌ ರಿಲೀಸ್‌.
  • ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಜೋಗ್ 101.
  • ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಕಾತುರವನ್ನು ಹೆಚ್ಚಿಸಿದೆ.
 ʼಜೋಗ್ 101ʼ ಚಿತ್ರದಲ್ಲಿ ವಿಜಯ ರಾಘವೇಂದ್ರ : ಸಸ್ಪೆನ್ಸ್ ಥ್ರಿಲ್ಲರ್ ಫಸ್ಟ್ ಲುಕ್ ರಿಲೀಸ್‌ title=

Vijay raghavendra : ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ "ಜೋಗ್ 101" ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು(ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರು. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ "ಜೋಗ್ 101" ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ.

ಇದನ್ನೂ ಓದಿ: ʼರಾಷ್ಟ್ರಪ್ರಶಸ್ತಿ ವಿಜೇತʼ ಅಲ್ಲು ಅರ್ಜುನ್ ದಿನಚರಿ..! ಐಕಾನ್ ಸ್ಟಾರ್ ಮನೆ ಹೇಗಿದೆ ನೋಡಿ..?

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ,  ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ "ಜೋಗ್ 101" ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News