Vijay raghavendra : ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ "ಜೋಗ್ 101" ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.


COMMERCIAL BREAK
SCROLL TO CONTINUE READING

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು(ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರು. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ "ಜೋಗ್ 101" ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ.


ಇದನ್ನೂ ಓದಿ: ʼರಾಷ್ಟ್ರಪ್ರಶಸ್ತಿ ವಿಜೇತʼ ಅಲ್ಲು ಅರ್ಜುನ್ ದಿನಚರಿ..! ಐಕಾನ್ ಸ್ಟಾರ್ ಮನೆ ಹೇಗಿದೆ ನೋಡಿ..?


ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.


ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ,  ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ "ಜೋಗ್ 101" ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.