Vijay Rakumar Graamaayana Movie : ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾಗೆ ಚಾಲನೆ ನೀಡಿದರು.


COMMERCIAL BREAK
SCROLL TO CONTINUE READING

ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.


ಇದನ್ನೂ ಓದಿ: ಸಖತ್ತಾಗಿದೆ "ರಾಜು ಜೇಮ್ಸ್ ಬಾಂಡ್" ಚಿತ್ರದ ಎಣ್ಣೆ ಹಾಡು


"ಗ್ರಾಮಾಯಣ" ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು.


ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಮಾಪಕರಾದ ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ದೇವನೂರು ಚಂದ್ರು.


ಇದನ್ನೂ ಓದಿ: ದೇಶದಲ್ಲಿ ʼ71ನೇ ವಿಶ್ವ ಸುಂದರಿ ಸ್ಪರ್ಧೆʼ: ʼಸಿನಿ ಶೆಟ್ಟಿʼ ಜೊತೆ 130 ಸುಂದರಿಯರ ಸೌಂದರ್ಯ ವಾರ್‌


ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ "ಗ್ರಾಮಾಯಣ. ನಾನು ಈವರೆಗೂ ಮಾಡಿರದ ಪಾತ್ರವಿದು. ಚಂದ್ರು ಅವರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಿರ್ಮಾಪಕರಿಗೆ ನನ್ನ ಧನ್ಯವಾದಗಳು ಎಂದರು ವಿನಯ್ ರಾಜಕುಮಾರ್.


"U I" ಚಿತ್ರದ ಸೆಟ್ ನಲ್ಲಿ "ಗ್ರಾಮಾಯಣ" ಚಿತ್ರದ ಟೀಸರ್ ನೋಡಿದೆ. ಟೀಸರ್ ಗೆ ತುಂಬಾ ಪಾಸಿಟಿವ್ ಕಾಮೆಂಟ್ಸ್ ಗಳು ಬಂದಿದ್ದವು. ಇಂತಹ ಒಳ್ಳೆಯ ಚಿತ್ರ ನಿಲ್ಲಬಾರದು ಎಂದು ಲಹರಿ ಫಿಲಂಸ್ ಜೊತೆ ಸೇರಿ ನಿರ್ಮಾಣ ಮಾಡುತ್ತಿದ್ದೇನೆ ಎನ್ನುತ್ತಾರೆ ಕೆ.ಪಿ.ಶ್ರೀಕಾಂತ್.


ಇದನ್ನೂ ಓದಿ: eghna Gaonkar : ಇಳಕಲ್ ಸೀರೆ ಉಟ್ಕೊಂಡು.. ಮೊಣಕಾಲ್ ಗಂಟ ಎತ್ಕೊಂಡು ಪಡ್ಡೆಹೈಕ್ಳ ನಿದ್ದೆಗೆಡಿಸಿದ ನಟಿ ಮೇಘನಾ .. 


ನಾನು "ಗ್ರಾಮಾಯಣ"ದ ಹಾಡೊಂದು ಕೇಳಿ ತುಂಬಾ ಖುಷಿಪಟ್ಟಿದೆ. ಈಗ ನಮ್ಮ ಅಣ್ಣ ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರ ಚೆನ್ನಾಗಿ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾವಿರಲಿ ಎಂದರು ಲಹರಿ ವೇಲು.


ಸಹ ನಿರ್ಮಾಪಕ ನವೀನ್ ಮನೋಹರನ್, ಕಲಾವಿದರಾದ ಅರುಣ್ ಸಾಗರ್, ಗೋಪಾಲಕೃಷ್ಣ ದೇಶಪಾಂಡೆ "ಗ್ರಾಮಾಯಣ" ದ ಕುರಿತು ಮಾತನಾಡಿದರು.  ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದ ಅಷ್ಟು ಗಣ್ಯರು "ಗ್ರಾಮಾಯಣ", " ರಾಮಾಯಣ" ದಷ್ಟೇ ಕೀರ್ತಿ ಪಡೆಯಲಿ ಎಂದು ಹಾರೈಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.