ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ "ವಿಜಯಾನಂದ" ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿದ್ದು ಈ ಚಿತ್ರದ "ಹಾಗೆ ಆದ ಆಲಿಂಗನ" ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ.


COMMERCIAL BREAK
SCROLL TO CONTINUE READING

ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಿದೆ. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, "ಗೀತಾ ಗೋವಿಂದಂ" ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. 


ಇದನ್ನೂ ಓದಿ- ಆಲಿಯಾ - ರಣಬೀರ್‌ಗೆ ತುಂಬಾ Lucky ಅಂತೆ ಮಗಳು! ಮುಂದೇನಾಗ್ತಾಳೆ? ಜ್ಯೋತಿಷಿಗಳು ಹೇಳಿದ್ದು ಹೀಗೆ


ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಕುರಿತು ಮಾತನಾಡಿದ ವಿಜಯ ಸಂಕೇಶ್ವರ:
ನನ್ನ‌ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಶಿಕಾ ಶರ್ಮ ಕೇಳಿದಾಗ, ಈ ಚಿಕ್ಕ ಹುಡಗಿ ಏನು ಮಾಡುತ್ತಾಳೆ? ಅನಿಸಿತು. ಆದರೆ ಈಗ, ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಶಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ನನ್ನ‌ ಕುಟುಂಬವರೆಲ್ಲಾ  ಉದ್ಯಮಿಗಳು. ನಮ್ಮ ತಂದೆಯವರು ಸಹ.‌ ನಾನು ಹದಿನೈದನೇ ವಯಸ್ಸಿಗೆ ಕೆಲಸ ಶುರು ಮಾಡಿದೆ. ನಮ್ಮ‌ ತಂದೆ ಬಳಿ ಹೋಗಿ ಟ್ರಾನ್ಸ್ ಪೋರ್ಟ್ ಬ್ಯುಸಿನೆಸ್ ಶುರು ಮಾಡುತ್ತೇನೆ ಅಂದಾಗ ಅವರು ಗಾಬರಿಯಾದರು. ಅಂದು ಒಂದು ಲಾರಿಯಿಂದ ಆರಂಭವಾದ ನನ್ನ ಉದ್ಯಮ, ಇಂದು ಬೃಹತಾಗಿ ಬೆಳೆದಿದೆ. ಟ್ರಾನ್ಸ್ ಪೋರ್ಟ್ ಹಾಗೂ ಮಾಧ್ಯಮ ಎರಡರಲ್ಲೂ ನಾವು ಮುಂದಿದ್ದೇವೆ. ನನ್ನ ಹಿಂದಿನ ಶಕ್ತಿ ನನ್ನ ಪತ್ನಿ ಲಲಿತಾ ಎಂದರೆ ತಪ್ಪಾಗಲಾರದು. ನನ್ನ ಮಗ ಆನಂದ ಈಗ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾನೆ. ಮೊಮ್ಮಗ ಶಿವ ಸದ್ಯದಲ್ಲೇ ಹೊಸ ಉದ್ಯಮ ಶುರು ಮಾಡಲಿದ್ದಾನೆ. ಈ ಚಿತ್ರ ಮಾಡಬೇಕಾದರೆ ನಾನು ನಿರ್ದೇಶಕರಿಗೆ ಹೇಳಿದ್ದೆ. ನನ್ನ‌ ಜೀವನ ಹೇಗಿತ್ತೊ ಹಾಗೆ ತೋರಿಸಬೇಕು. ಬೇರೆ ಏನು ಸೇರಿಸಬಾರದು ಅಂತ. ನಾನು ಚಿಕ್ಕ ವಯಸ್ಸಿನಲ್ಲಿ ಹೇಗಿದ್ದನೋ, ನಾಯಕ ನಿಹಾಲ್ ಹಾಗೆ ಕಾಣುತ್ತಾರೆ. ಆ ಮೀಸೆ, ಬಣ್ಣಬಣ್ಣದ ಅಂಗಿಗಳು ಎಲ್ಲವು.. ಆ  ವಯಸ್ಸಿನಲ್ಲಿ ನಾನು ಹಾಗೆ ಇದ್ದೆ. ನಾಯಕಿ ಸಿರಿ ಪ್ರಹ್ಲಾದ್ ಕೂಡ ನನ್ನ ಹೆಂಡತಿಯನ್ನೇ ಹೋಲುತ್ತಾರೆ. ಈ ಚಿತ್ರ ಯುವಕರಿಗೆ ಸ್ಪೂರ್ತಿಯಾಗಲಿ. ಡಿಸೆಂಬರ್ ಒಂಭತ್ತರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು ವಿಜಯ ಸಂಕೇಶ್ವರ. 


ಇದನ್ನೂ ಓದಿ- Selena Gomez : ಗಂಭೀರ ಕಾಯಿಲೆಗೆ ತುತ್ತಾದ ಪ್ರಸಿದ್ಧ ಗಾಯಕಿ! ಕಮರಿತು ತಾಯಿಯಾಗುವ ಕನಸು?


ಶರಣ್, ಹರ್ಷಿಕಾ ಪೂಣಚ್ಛ ಅತಿಥಿಗಳಾಗಿ ಆಗಮಿಸಿ‌ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕಿ ರಿಶಿಕಾ ಶರ್ಮ ಮಾಹಿತಿ ನೀಡಿದರು. ಹಾಡುಗಳ ಬಗ್ಗೆ ಗೋಪಿ ಸುಂದರ್, ಅಭಿನಯದ ಕುರಿತು ನಾಯಕ ನಿಹಾಲ್, ನಾಯಕಿ ಸಿರಿ ಪ್ರಹ್ಲಾದ್, ಭರತ್ ಬೋಪ್ಪಣ್ಣ, ಅರ್ಚನಾ ಕೊಟ್ಟಿಗೆ, ರಾಜೇಶ್ ನಟರಂಗ ಮಾತನಾಡಿದರು. ಈ ಚಿತ್ರದಲ್ಲಿ ಅನಂತನಾಗ್, ರವಿಚಂದ್ರನ್, ವಿನಯಾಪ್ರಸಾದ್, ಪ್ರಕಾಶ್ ಬೆಳವಾಡಿ, ರಮೇಶ್ ಭಟ್, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.
 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.