ಬೆಂಗಳೂರು: ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸೋಮವಾರ ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ U/A ಅರ್ಹತಾ ಪತ್ರ ದೊರಕಿದೆ. ಅದಕ್ಕೂ ಮುನ್ನ ಜರುಗಿದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಚಂದನವನದ ತಾರೆಯರ ಹಿಂಡು ಸಾಕ್ಷಿಯಾಗಿತ್ತು.


COMMERCIAL BREAK
SCROLL TO CONTINUE READING

ಕ್ರೇಜಿ಼ಸ್ಟಾರ್ ರವಿಚಂದ್ರನ್, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ‘ಡಾಲಿ’ ಧನಂಜಯ್, ಸುಮನ್, ಶೃತಿ, ನಿಶ್ವಿಕಾ ನಾಯ್ಡು ಹಾಗೂ ಮನುರಂಜನ್ ರವಿಚಂದ್ರನ್ ಸೇರಿದಂತೆ ಇನ್ನೂ ಅನೇಕರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಾವಿರಾರು ಪ್ರೇಕ್ಷಕರು ಹಾಗೂ ಅಭಿಮಾನಿಗಳು ಕೂಡ ಹಾಜರಾಗಿದ್ದರು.


ಇದನ್ನೂ ಓದಿ: Kiccha Sudeep: ಪೊಲೀಸ್ ತಂಡದ ಜೊತೆ ಕಿಚ್ಚನ ಕ್ರಿಕೆಟ್.. ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಸುದೀಪ್


ರವಿಚಂದ್ರನ್ ಹಾಗೂ ಶಿವರಾಜ್‌ಕುಮಾರ್ ‘ತ್ರಿವಿಕ್ರಮ’ ಸಿನಿಮಾ ನೋಡಿ ಹರಸುವಂತೆ ಕೇಳಿಕೊಂಡರು. ಕಲರ್ ಫುಲ್ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಸಂಗೀತ ಸಂಜೆಯೂ ಹೈಲೈಟ್ ಆಗಿತ್ತು.


ಸಹನಾ ಮೂರ್ತಿ ‘ತ್ರಿವಿಕ್ರಮ’ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಪ್ಲೀಸ್ ಮಮ್ಮಿ’, ‘ಹನಿ ಬನಿ ಫೀಲ್ ಮೈ ಲವ್’ ಹಾಗೂ ‘ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್...’ ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಮಿಲಿಯನ್‍ಗಟ್ಟಲೆ ಹಿಟ್ಸ್ ದಾಖಲಿಸಿರುವುದು ‘ತ್ರಿವಿಕ್ರಮ’ನ ಹೆಚ್ಚುಗಾರಿಕೆಯಾಗಿದೆ.


ಇದನ್ನೂ ಓದಿ: ಜೂನ್ 21ಕ್ಕೆ ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಟ್ರೈಲರ್ ಬಿಡುಗಡೆ


ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ.  ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.