ಶಾಕುಂತಲೆ ಜೊತೆ ‘ತ್ರಿವಿಕ್ರಮ’ನ ಗಾನಾಬಜಾನಾ: ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ಫ್ಯಾನ್ಸ್ ಫಿದಾ!

ಕ್ರೇಜಿಸ್ಟಾರ್ ವಿ.ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ.

Written by - YASHODHA POOJARI | Edited by - Puttaraj K Alur | Last Updated : Jun 14, 2022, 07:45 PM IST
  • ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಸಿನಿಮಾ ಜೂನ್ 24ಕ್ಕೆ ರಿಲೀಸ್ ಆಗಲಿದೆ
  • ‘ತ್ರಿವಿಕ್ರಮ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಸಖತ್ ಸೌಂಡ್ ಮಾಡುತ್ತಿದೆ
  • ಯೋಗರಾಜ್ ಭಟ್ ಸಾಹಿತ್ಯವಿರುವ ‘ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...’ ಹಾಡು ರಿಲೀಸ್
ಶಾಕುಂತಲೆ ಜೊತೆ ‘ತ್ರಿವಿಕ್ರಮ’ನ ಗಾನಾಬಜಾನಾ: ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ಫ್ಯಾನ್ಸ್ ಫಿದಾ! title=
ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ಫ್ಯಾನ್ಸ್ ಫಿದಾ!

ಬೆಂಗಳೂರು: ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ. ರಿಲೀಸ್‍ಗೂ ಮುನ್ನವೇ ಸಿನಿಮಾ ಹಾಡುಗಳ ಮೂಲಕ ಸಖತ್ ಸೌಂಡ್ ಮಾಡುತ್ತಿದ್ದು, ಅಭಿಮಾನಿಳಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಇದೇ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ.

ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ‘ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...’ ಎಂಬ ಹಾಡನ್ನು ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಬೃಹತ್ ಸೆಟ್ ಹಾಗೂ ಕಲರ್ ಕಲರ್ ಕಾಸ್ಟ್ಯೂಮ್'ಗಳಲ್ಲಿ ಚಿತ್ರೀಕರಿಸಲಾಗಿದೆ. ಅರ್ಜುನ್ ಜನ್ಯ ಸಂಗೀತವಿರುವ ಈ ಹಾಡಿಗೆ ಭೂಷಣ್ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಕ್ಕಿ ಹಾಗೂ ಆಕಾಂಕ್ಷಾ ಶರ್ಮಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಒಟ್ಟಾರೆ ನೂರಕ್ಕೂ ಅಧಿಕ ದಿನಗಳ ಕಾಲ ಶೂಟಿಂಗ್ ನಡೆಸಿರುವ ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ದೊಡ್ಡ ಮಟ್ಟದಲ್ಲಿ ಬಿಡುಗಡೆಗೆ ಸಜ್ಜಾಗಿದೆ. A2 ಮ್ಯೂಸಿಕ್ ಯೂಟ್ಯೂಬ್ ಚಾನಲ್'ನಲ್ಲಿ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ: ‘777 ಚಾರ್ಲಿ’ ನೋಡಿ ಗಳಗಳನೆ ಅತ್ತ ಸಿಎಂ ಬೊಮ್ಮಾಯಿ..!

‘ರೋಸ್’, ‘ಮಾಸ್ ಲೀಡರ್’ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಸಹನಾ ಮೂರ್ತಿ ‘ತ್ರಿವಿಕ್ರಮ’ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಪ್ಲೀಸ್ ಮಮ್ಮಿ’ ಹಾಗೂ ‘ಹನಿ ಬನಿ ಫೀಲ್ ಮೈ ಲವ್’ ಹಾಡು ಮಿಲಿಯನ್'ಗಟ್ಟಲೆ ಹಿಟ್ಸ್ ದಾಖಲಿಸಿ, ಟ್ರೆಂಡಿಂಗ್'ನಲ್ಲಿದೆ.

ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.

ಇದನ್ನೂ ಓದಿ: ಐಶ್ವರ್ಯಾ ರೈ ಪಾಸ್‌ಪೋರ್ಟ್‌ನಲ್ಲಿರೋ ಫೋಟೋ ಸ್ಪೆಶಾಲಿಟಿ ಏನ್‌ ಗೊತ್ತಾ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News