Vikrant Rona: ಆಪರೇಷನ್‌ ಥಿಯೇಟರ್‌ನಲ್ಲೂ ರಕ್ಕಮ್ಮನದ್ದೇ ಹವಾ!

Vikrant Rona: ಬಹುನಿರೀಕ್ಷಿತ ಚಿತ್ರ ವಿಕ್ರಾಂತ್‌ ರೋಣ ಶೂಟಿಂಗ್ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಟೀಸರ್, ಪೋಸ್ಟರ್ ಗಳಿಂದ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡಲು ಸಿದ್ಧವಾಗಿದೆ. 

Written by - Chetana Devarmani | Last Updated : Jul 9, 2022, 05:48 PM IST
  • ಬಹುನಿರೀಕ್ಷಿತ ಚಿತ್ರ ವಿಕ್ರಾಂತ್‌ ರೋಣ ಶೂಟಿಂಗ್ ರಿಲೀಸ್‌ಗೆ ದಿನಗಣನೆ ಶುರು
  • ಟೀಸರ್, ಪೋಸ್ಟರ್ ಗಳಿಂದ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ
  • ಆಪರೇಷನ್‌ ಥಿಯೇಟರ್‌ನಲ್ಲೂ ರಕ್ಕಮ್ಮನದ್ದೇ ಹವಾ!
Vikrant Rona: ಆಪರೇಷನ್‌ ಥಿಯೇಟರ್‌ನಲ್ಲೂ ರಕ್ಕಮ್ಮನದ್ದೇ ಹವಾ! title=
ವಿಕ್ರಾಂತ್‌ ರೋಣ

ಬಹುನಿರೀಕ್ಷಿತ ಚಿತ್ರ ವಿಕ್ರಾಂತ್‌ ರೋಣ ಶೂಟಿಂಗ್ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಟೀಸರ್, ಪೋಸ್ಟರ್ ಗಳಿಂದ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡಲು ಸಿದ್ಧವಾಗಿದೆ. ನಟ ಕಿಚ್ಚ ಸುದೀಪ್ ಮುಖ್ಯಭೂಮಿಕೆಯ ಬಹುತಾರಾಗಣದಲ್ಲಿ ಮೂಡಿಬರುತ್ತಿರುವ ಫ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣವನ್ನು ತೆರೆಮೇಲೆ ಕಾಣಲು ಅಭಿಮಾನಿಗಳು ತುದಿಗಾಲ ಮೇಲೆ ನಿಂತಿದ್ದಾರೆ. 

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹೇಳಿದ್ದೇನು..?

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಗಡಂಗ್ ರಕ್ಕಮ್ಮನ ಲಿರಿಕಲ್ ವಿಡಿಯೋ ಹಲವು ದಿನಗಳ ಹಿಂದೆಯೇ ಬಿಡುಗಡೆಯಾಗಿದೆ. ಸುದೀಪ್ ಮತ್ತು ಜಾಕ್ವೆಲಿನ್ ಫೆರ್ನಾಂಡಿಸ್ ಜೊತೆಯಾಗಿ ಹೆಜ್ಜೆ ಹಾಕಿರುವವ ಈ ಹಾಡು ಈಗಾಗಲೇ ಯುಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡಿದೆ. 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಹಾಡನ್ನು ಅನುಪ್ ಭಂಡಾರಿ ಬರೆದಿದ್ದಾರೆ. 
ಜಗತ್ತಿನಾದ್ಯಂತ ಹೈಪ್‌ ಕ್ರಿಯೇಟ್‌ ಮಾಡಿ, ಅಭಿಮಾನಿಗಳ ಎದೆಬಡಿತ ಹೆಚ್ಚಿಸಿರುವ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ಹಾಡಿಗೆ ಎಲ್ಲರೂ ಫಿದಾ ಆಗಿದ್ದಾರೆ. ಯೂಟೂಬ್‌, ಟ್ವಿಟರ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹೀಗೆ ಎಲ್ಲಾ ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ. 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಬಿಡುಗಡೆಗೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಳ್ಳಿತೆರೆ ಮೇಲೆ ಕಿಚ್ಚನ ಅಬ್ಬರ ಕಣ್ತುಂಬಿಕೊಳ್ಳಲು ಫ್ಯಾನ್ಸ್‌ ಕಾತುರರಾಗಿದ್ದಾರೆ. ಈ ಸಿನಿಮಾದ ಮೂಲಕ ಇದೇ ಮೊದಲ ಬಾರಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. 

ಇದನ್ನೂ ಓದಿ: GR in VR: ‘ವಿಕ್ರಾಂತ್ ರೋಣ’ದ ಜಾಕ್ವೆಲಿನ್ ಫರ್ನಾಂಡಿಸ್ ಫಸ್ಟ್ ಲುಕ್ ರಿಲೀಸ್..!

ಸಾಂಗ್‌ ರಿಲೀಸ್‌ ಬಳಿಕ ಜಾಕ್ವೆಲಿನ್‌ ಅವರಿಗೆ ಕೊಟ್ಟ ಮಾತಿನಂತೆ ಕಿಚ್ಚ ಸುದೀಪ್‌ ರಾ ರಾ ರಕ್ಕಮ್ಮ ಹಾಡಿಗೆ ರೀಲ್ಸ್‌ ಮಾಡಿದ್ದರು. ಇದೀಗ ಈ ಹಾಡಿಗೆ ಅನೇಕರು ರೀಲ್ಸ್‌ ಮಾಡುತ್ತಿದ್ದು, ಆಪರೇಷನ್‌ ಥಿಯೇಟರ್‌ನಲ್ಲಿಯೂ ಈ ಹಾಡಿಗೆ ವೈದ್ಯಕೀಯ ಸಿಬ್ಬಂದಿ ಹೆಜ್ಜೆಹಾಕಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News