#VikranthronaZEE5Contest: ವಿಕ್ರಾಂತ್ ರೋಣ ರಾ..ರಾ..ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿದವರಿಗೆ ಸಿಕ್ತು 25,000ರೂ. ಬಹುಮಾನ

ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಮಿನಿಟ್ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ 3 ಸ್ಥಾನದಲ್ಲಿದೆ.

Written by - Yashaswini V | Last Updated : Sep 22, 2022, 12:09 PM IST
  • ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ
    'ವಿಕ್ರಾಂತ್​ ರೋಣ'
  • ಸೆಪ್ಟೆಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ
  • Zee5 ಒಟಿಟಿ ಟ್ರೇಡಿಂಗ್ ಟಾಪ್ 3ರಲ್ಲಿ ಸ್ಥಾನ ಪಡೆದ ವಿಕ್ರಾಂತ್ ರೋಣ...ರಾ..ರಾ..ರಾ..ರಕ್ಕಮ್ಮ
#VikranthronaZEE5Contest: ವಿಕ್ರಾಂತ್ ರೋಣ ರಾ..ರಾ..ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿದವರಿಗೆ ಸಿಕ್ತು 25,000ರೂ. ಬಹುಮಾನ  title=
VikranthronaZEE5Contest

ಬೆಂಗಳೂರು: ಸಿನಿ ಜಗತ್ತಿನಲ್ಲಿ ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ನಲ್ಲಿ ಈಗಾಗಲೇ ಹಲವು ದಾಖಲೆ ಸೃಷ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ಇದೀಗ ಜೀ5 ಒಟಿಟಿಯಲ್ಲೂ ಸಹ ಸಖತ್ ಸದ್ದು ಮಾಡುತ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ  ವಿಕ್ರಾಂತ್ ರೋಣ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಮಿನಿಟ್ ವೀಕ್ಷಣೆ ಕಂಡು ದಾಖಲೆ ಬರೆದಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಷ್ಟೇ ಅಲ್ಲ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ ಮೂರರಲ್ಲಿ ಸ್ಥಾನ ಪಡೆದುಕೊಂಡಿದೆ.

ಜೀ ವಾಹಿನಿಯ  ಜೀ5 ಒಟಿಟಿ ಸಂಸ್ಥೆ #VikranthronaZEE5Contest ನಡಿ ರಕ್ಕಮ್ಮ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದವರಿಗೆ 25 ಸಾವಿರ ಬಹುಮಾನ ಹಾಗೂ ಪ್ರಮುಖ 10 ಸ್ಪರ್ಧಿಗಳಿಗೆ ಉಡುಗೊರೆ ಹಾಗೂ ಸುದೀಪ್ ವೈಯಕ್ತಿಕ ಪಾತ್ರ ಕೊಡುವುದಾಗಿ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ರಕ್ಕಮ್ಮ ಹಾಡಿಗೆ ಸಖತ್ ಸ್ಟೆಪ್ ಹಾಕಿದವರಿಗೆ 25 ಸಾವಿರ ಹಣ ಹಾಗೂ 10 ಜನರಿಗೆ ಕಿಚ್ಚ ಸುದೀಪ್ ಅವರ ಕಡೆಯಿಂದ ಪತ್ರ ಹಾಗೂ ಗಿಫ್ಟ್ ಸಹ ನೀಡಲಾಗಿದೆ. 

ಇದನ್ನೂ ಓದಿ- ಧ್ರುವ ಸರ್ಜಾ ಸಿನಿಮಾದಲ್ಲಿ ನಟಿಸಲಿದ್ದಾರೆ ಶಿಲ್ಪಾ ಶೆಟ್ಟಿ, ಸಂಜಯ್ ದತ್

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ  
'ವಿಕ್ರಾಂತ್​ ರೋಣ' ಚಿತ್ರವನ್ನು ಅದ್ದೂರಿ ಬಜೆಟ್​ನಲ್ಲಿ  ಜಾಕ್​ ಮಂಜು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಕಿಚ್ಚ ಸುದೀಪ್​, ಅನೂಪ್​ ಭಂಡಾರಿ ಜೊತೆಗೆ ನೀತಾ ಅಶೋಕ್​, ಮಿಲನಾ ನಾಗರಾಜ್​, ಜಾಕ್ವೆಲಿನ್​ ಫರ್ನಾಂಡಿಸ್​, ಮಧುಸೂದನ್​ ರಾವ್​, ರವಿಶಂಕರ್ ಗೌಡ ಮುಂತಾದವರು ಸಹ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ- ಸಿಕ್ಕೇ ಬಿಡ್ತು ರಾಣಾ ಸಿನಿಮಾ ಅಪ್ಡೇಟ್-ಪ್ರೇಮ್ ಶಿಷ್ಯ ವಿಜಯ್ ಈಶ್ವರ್ ಹೇಳ್ತಾರೆ ಆಕ್ಷನ್ ಕಟ್..!

'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದವು. ಎಲ್ಲ ಹಾಡುಗಳು ಸೂಪರ್ ಹಿಟ್ ಕೂಡ ಆಗಿದ್ದವು. ಆದರೆ, ಜಾಕ್ವೆಲಿನ್ ಫರ್ನಾಂಡಿಸ್​ ಜೊತೆ ಕಿಚ್ಚ ಸುದೀಪ್ ಹೆಜ್ಜೆ ಹಾಕಿದ ‘ರಾ ರಾ ರಕ್ಕಮ್ಮ..’ ಹಾಡಿಗೆ​ ಅಭಿಮಾನಿಗಳು ಫಿದಾ ಆಗಿದ್ದರು. ಥಿಯೇಟರ್ ನಲ್ಲಿಯೂ ಭರ್ಜರಿ ಕಮಾಯಿ ಮಾಡಿದ್ದ ಸಿನಿಮಾ ಈಗ ಜೀ5 ಒಟಿಟಿಯಲ್ಲಿಯೂ ಸಖತ್ ಸದ್ದು ಮಾಡುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News